BREAKING: ಇಂದಿನಿಂದ ಬೆಳಗಾವಿ ಅಧಿವೇಶನ: ಸರ್ಕಾರದ ವಿರುದ್ಧ ಹೋರಾಡಲು ವಿವಿಧ ಸಂಘಟನೆಗಳು ಸಜ್ಜು: 84 ಸಂಘಟನೆಗಳಿಂದ ಪ್ರತಿಭಟನೆ

ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಆಡಳಿತ ಪಕ್ಷವನ್ನು ಕಟ್ಟಿಹಾಕಲು ವಿಪಕ್ಷಗಳು ಸಜ್ಜಾಗಿವೆ. ಇದೇ ವೇಳೆ ಸರ್ಕಾರದ ವಿರುದ್ಧ ಹೋರಾಡಲು ವಿವಿಧ ಸಂಘಟನೆಗಳು ಸಿದ್ಧತೆ ನಡೆಸಿವೆ.

ಬೆಳಗಾವಿಯಲ್ಲಿ 84 ವಿವಿಧ ಸಂಘಟನೆಗಳಿಂದ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಧರಣಿ, ಪ್ರತಿಭಟನೆಗಳಿಗೆ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿ ತಾತ್ಕಾಲಿಕ ಟೆಂಟ್ ನಿರ್ಮಾಣ ಮಾಡಲಾಗಿದೆ. ಒಂದೇ ಕಡೆ ಪ್ರತಿಭಟನೆ ನಡೆಸಲು 6 ಟೆಂಟ್ ಗಳನ್ನು ಹಾಕಲಾಗಿದೆ. ಪ್ರತಿಭಟನಾಕಾರರ ಸಂಖ್ಯೆ ಆಧರಿಸಿ ಟೆಂಟ್ ನೀಡಲು ತೀರ್ಮಾನಿಸಲಾಗಿದೆ.

ಬೃಹತ್ ಪ್ರತಿಭಟನೆಗಳಿಗಾಗಿ ಓಲ್ಡ್ ಪಿಬಿ ರಸ್ತೆಯ ಬಳಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ರೈತರು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಉಪನ್ಯಾಸಕರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ, ಬೆಳಗಾವಿ ಜಿಲ್ಲೆ ವಿಭಜನೆ ಸೇರಿದಂತೆ ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಅಟ ನಡೆಸಲು ಸಂಘಟನೆಗಳು ಮುಂದಾಗಿವೆ. ಪೊಲೀಸರು ಕೂಡ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಳ್ಳದಂತೆ ಅಲರ್ಟ್ ಆಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read