HomeKarnatakaBIG NEWS: ಬೆಳಗಾವಿ ಅಧಿವೇಶನ: ಸಮರ್ಥ ವಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

BIG NEWS: ಬೆಳಗಾವಿ ಅಧಿವೇಶನ: ಸಮರ್ಥ ವಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಸಮರ್ಥ ವಿಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ. ಜೊತೆಗೆ ಬಡ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿ ಸಿಎಂ ಸಿದ್ದರಾಮಯ್ಯ ಅವರಿಂದ ಉತ್ತರ ಪಡೆಯುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡದ ವಿಜಯೇಂದ್ರ, ಕರ್ನಾಟಕದಲ್ಲಿ ಪೊಳ್ಳು ಗ್ಯಾರಂಟಿ ಭರವಸೆಗಳನ್ನು ನೀಡಿದ್ದ ಹಾಗೆ ಇಂಡಿಯಾ ಮೈತ್ರಿಕೂಟ ದೇಶದ ನಾನಾಕಡೆಗಳಲ್ಲಿ ಗ್ಯಾರಂಟಿ ಮಂತ್ರ ಪಠಿಸಿತು. ಆದರೆ ಜನರು ಅವರ ಟೊಳ್ಳು ಭರವಸೆಗಳನ್ನು ನಂಬಲು ತಯಾರಿಲ್ಲ. ಜನರಿಗೆ ಬೇಕಿರುವುದು ದೇಶದ ರಕ್ಷಣೆ ಮತ್ತು ಗ್ಯಾರಂಟಿ. ಅದನ್ನು ಪ್ರಧಾನಿ ನರೇಂದ್ರ ಮೋದಿ ಮಾತ್ರ ಮಾಡಬಲ್ಲರು ಎಂಬುದು ತಿಳಿದಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular