ಬೆಳಗಾವಿ: ಬೆಳಗಾವಿ ಅಧಿವೇಶನ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸರ್ಕಾರದ ವಿರುದ್ಧ ಸಾಲು ಸಾಅಲು ಪ್ರತಿಭಟನೆಗಳು ನಡೆಯಲಿವೆ. ವಿಪಕ್ಷ ಬಿಜೆಪಿ ರೈತರೊಂದಿಗೆ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಸುವರ್ಣಸೌಧದ ಸುತ್ತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುವರ್ಣಸೌಧ ಮುಖದ್ವಾರ ಹಾಗೂ ಸುತ್ತಮುತ್ತಲು ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಇಬ್ಬರು ಎಸ್ ಪಿ, ಡಿವೈಎಸ್ ಪಿ, ಇನ್ಸ್ ಪೆಕ್ಟರ್ ಗಳನ್ನು ನಿಯೋಜಿಸಲಾಗಿದೆ. 10 ಕೆ ಎಸ್ ಆರ್ ಪಿ ತುಕಡಿ, 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಸುವರ್ಣಸೌಧಕ್ಕೆ ಪ್ರವೇಶ ನೀಡಲಾಗುತ್ತಿದೆ.
