ಬೆಳಗಾವಿ: ಕನ್ನಡ ರಾಜ್ಯೋತ್ಸವದ ದಿನದಂದೇ ಶಿವಸೇನೆ ಕಾರ್ಯಕರ್ತರು ಉದ್ಧಟತನ ಮೆರೆದಿದ್ದಾರೆ. ಬೆಳಗಾವಿ ಗಡಿಗೆ ನುಗ್ಗಿ ಪುಂಡಾಟ ಮೆರೆಯಲು ಮುಂದಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಗನೊಳ್ಳಿ ಬಳಿ ರಾಜ್ಯದ ಗಡಿಯೊಳಗೆ ನುಗ್ಗಲು ಶಿವಸೇನೆ ಕಾರ್ಯಕರ್ತರು ಮುಂದಾಗಿದ್ದಾರೆ. ೫೦ ಜನರ ಗುಂಪಿನೊಂದಿಗೆ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಮಹಾರಾಷ್ಟ್ರ ಪರ ಘೋಷಣೆಗಳನ್ನು ಕೂಗಿದ್ದಾರೆ.
ಈ ವೇಳೆ ಬೆಳಗಾವಿ ಪೊಲೀಸರು ಕಾರ್ಯಕರ್ತರನ್ನು ತಡೆದಿದ್ದಾರೆ. ಗಡಿಯೊಳಗೆ ಬರಲು ಅವಕಾಶನೀಡಿಲ್ಲ. ಈ ವೇಳೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಸ್ಥಲದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಮಹಾರಾಷ್ಟ್ರ ಪೊಲೀಸರು ಶಿವಸೆನೆ ಪುಂಡರನ್ನು ವಶಕ್ಕೆ ಪಡೆದಿದ್ದಾರೆ.
