HomeKarnatakaBIG NEWS: ರಜೆ ಮೇಲೆ ಬಂದಿದ್ದ ಯೋಧ ಕೆರೆಗೆ ಹಾರಿ ಆತ್ಮಹತ್ಯೆ

BIG NEWS: ರಜೆ ಮೇಲೆ ಬಂದಿದ್ದ ಯೋಧ ಕೆರೆಗೆ ಹಾರಿ ಆತ್ಮಹತ್ಯೆ

ಬೆಳಗಾವಿ: ರಜೆಯ ಮೇಲೆ ಬಂದಿದ್ದ ಯೋಧನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.

ನರೇಶ್ ಯಲ್ಲಪ್ಪ ಆಗಸರ (28) ಮೃತ ದುರ್ದೈವಿ. 20 ದಿನಗಳ ಹಿಂದೆ ನರೇಶ್ ರಜೆ ಮೇಲೆ ಊರಿಗೆ ಬಂದಿದ್ದರು. ನಿನ್ನೆ ಕೆಲಸಕ್ಕೆ ವಾಪಾಸ್ ಹೋಗುವುದಾಗಿ ಹೇಳಿ ಹೊರಟವರು ಕಿತ್ತೂರು ತಾಲೂಕಿನ ಪರಸಟ್ಟಿ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯೋಧನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಯೋಧನ ಮೃತದೇಹಕ್ಕಾಗಿ ಕೆರೆಯಲ್ಲಿ ಶೋಧಕಾರ್ಯ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್ ಐ ಪ್ರವೀಣ ಗಂಗೋಳ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular