ಬೆಳಗಾವಿ: ವಸತಿ ಶಾಲೆಯಲ್ಲಿ ಬೆಳಿಗ್ಗೆ ಉಪಹಾರ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹೆರೆಕೋಡಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಇಂದು ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟ್ಟು ನೀಡಲಾಗಿತ್ತು. ಉಪ್ಪಿಟ್ಟು ಸೇವಿಸಿದ್ದ ಕೆಲ ಸಮಯದಲ್ಲೇ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ.
30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಇಬ್ಬರು ವಿದ್ಯಾರ್ಥಿಗಳನ್ನು ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.