HomeKarnatakaಕುಡಿದ ಮತ್ತಿನಲ್ಲಿ ದೇವಸ್ಥಾನದ ಮೇಲೆ ಕಲ್ಲು ತೂರಾಟ ನಡೆಸಿದ ಅನ್ಯಕೋಮಿನ ಯುವಕ: ಕಂಬಕ್ಕೆ ಕಟ್ಟಿ ಹಾಕಿ...

ಕುಡಿದ ಮತ್ತಿನಲ್ಲಿ ದೇವಸ್ಥಾನದ ಮೇಲೆ ಕಲ್ಲು ತೂರಾಟ ನಡೆಸಿದ ಅನ್ಯಕೋಮಿನ ಯುವಕ: ಕಂಬಕ್ಕೆ ಕಟ್ಟಿ ಹಾಕಿ ಪ್ರಶ್ನಿಸಿದ ಸ್ಥಯೀಯರು

ಬೆಳಗಾವಿ: ಕುಡಿದ ಮತ್ತಿನಲ್ಲಿಇ ಅನ್ಯಕೋಮಿನ ಯುವಕನೊಬ್ಬ ದೇವಸ್ಥಾನದ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಗಾವಿ ನಗರದ ಪಾಂಗುಳಗಲ್ಲಿಯಲ್ಲಿಇ ನಡೆದಿದೆ.

ಇಲ್ಲಿನ ಅಶ್ವತ್ಥಾಮ ದೇವಸ್ಥಾನದ ಮೇಲೆ ಯುವಕ ಕಲ್ಲು ತೂರಾಟ ನಡೆಸಿದ್ದಾನೆ. ದೇವಸ್ಥಾನದ ಮೇಲೆ ಕಲ್ಲು ತೂರುತ್ತಿದ್ದಂತೆ ಸ್ಥಳೀಯರು ಯುವಕನನ್ನು ಹಿಇಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಯಾಕೆ ಕಲ್ಲು ತೂರಾಟ ನಡೆಸುತ್ತಿದ್ದೀಯಾ ಎಂದು ಪ್ರಶ್ನಿಸುತ್ತಿದ್ದಂತೆ ತಪ್ಪಾಯ್ತು ಬಿಟ್ಟು ಬಿಡಿ ಎಂದಿದ್ದಾನೆ. ಅಲ್ಲದೇ ಈ ಹಿಂದೆ ವ್ಯಕ್ತಿಯೊಬ್ಬ ಬುರ್ಖಾ ಧರಿಸ್ ಡ್ಯಾನ್ಸ್ ಮಡಿದ್ದ ಎಂದು ಬಡಬಡಾಯಿಸಿದ್ದಾನೆ.

ದೇವಸ್ಥಾನದ ಮೇಲೆ ಕಲ್ಲೆಸೆದ ವ್ಯಕ್ತಿಯನ್ನು ಉಜ್ವಲ್ ನಗರದ ಯಾಸಿರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸ್ಥಳಿಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular