HomeKarnatakaBIG NEWS: ಮತ್ತೊಂದು ಭೀಕರ ಅಪಘಾತ: ವೈದ್ಯ ಸ್ಥಳದಲ್ಲೇ ದುರ್ಮರಣ

BIG NEWS: ಮತ್ತೊಂದು ಭೀಕರ ಅಪಘಾತ: ವೈದ್ಯ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ರಾಜ್ಯದಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ಹಲವರು ಅಪಘಾತದಲ್ಲಿ ಬಲಿಯಾಗುತ್ತಿದ್ದಾರೆ. ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಗರಮುನ್ನೋಳಿ ಬಳಿ ನಡೆದಿದೆ.

ನಾಗರಮುನ್ನೋಳಿಯ ವೈದ್ಯ ಡಾ.ಸಿದ್ರಾಮ್ ಚೌಗಲಾ (43) ಮೃತ ದುರ್ದೈವಿ. ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಈ ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಹುಕ್ಕೇರಿ ಠಾಣೆ ಪೊಲಿಸರು ಭೇಟಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೃತ ವೈದ್ಯ ಪತ್ನಿ, ಮಗ ಹಾಗೂ ಮಗಳನ್ನು ಅಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular