HomeKarnatakaBIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ದುರ್ಮರಣ

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲಾಯಪ್ಪ ಪುಂಡಲಿಕ ಮರಗಾಳೆ (45) ಮೃತರು. ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಈ ದುರಂತ ಸಂಭವಿಸಿದೆ. ಲಾಯಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಬೈಕ್ ಸವಾರ ಮಲ್ಲಪ್ಪ ಗುರಬಸು ಮಂಟೂರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಅಥಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಐಗಳಿ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular