HomeKarnatakaBIG NEWS: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಘಟನೆ ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಮೂವರಿಗೆ...

BIG NEWS: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಘಟನೆ ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಮೂವರಿಗೆ ಸನ್ಮಾನ

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯನ್ನು ತಡೆಯಲು ಯತ್ನಿಸಿದ ಮೂವರಿಗೆ ಸನ್ಮಾನ ಮಾಡಲಾಗಿದೆ.

ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಮಹಿಳೆಯನ್ನು ವಿವಸ್ತ್ರಗೊಳೀಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಲಾಗಿತ್ತು. ಈ ವೇಳೆ ಕೃತ್ಯವನ್ನು ತಡೆಯಲು ಯತ್ನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಮೂವರಿಗೆ ಕೋರ್ಟ್ ಪ್ರಶಂಸನೀಯ ಪತ್ರ ನೀಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಂಟಮೂರಿ ಗ್ರಾಮದ ನಿವಾಸಿಗಳಾದ ಜಹಂಗೀರ್ ತಹಶೀಲ್ದಾರ್, ವಾಸಿಂ ಮಕಾನದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳಿಕಾರ್ ಅವರನ್ನು ಬೆಳಗಾವಿ ನಗರ ಪೊಲೀಸರು ಸನ್ಮಾನಿಸಿ, ಕೋರ್ಟ್ ನೀಡಿದ್ದ ಪ್ರಶಂಸನೀಯ ಪತ್ರವನ್ನು ನೀಡಿದರು.

ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಜಹಾಂಗೀರ್ ಎಂಬುವವರಿಗೆ ಪ್ರಶಂಸನೀಯ ಪತ್ರ ನೀಡಿ ಗೌರವಿಸಿದರು. ಬಳಿಕ ಮೂವರಿಗೂ ತಲಾ 5 ಸಾವಿರ ರೂಪಾಯಿ ನಗದು ಬಹುಮಾನ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular