HomeKarnatakaBIG NEWS: ವಿಧಾನಮಂಡಲ ಚಳಿಗಾಲದ ಅಧಿವೇಶನ: ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ವಿಮಾನ ಸೇವೆ

BIG NEWS: ವಿಧಾನಮಂಡಲ ಚಳಿಗಾಲದ ಅಧಿವೇಶನ: ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ವಿಮಾನ ಸೇವೆ

ಬೆಳಗಾವಿ: ಡಿಸೆಂಬರ್ 9ರಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ.

ಇಂಡಿಗೊ ಏರ್ ಲೈನ್ಸ್ ಸಂಸ್ಥೆ ಡಿಸೆಂಬರ್ 9ರಿಂದ 19ರವರೆಗೆ ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ವಿಮಾನ ಸಂಚಾರ ಆರಂಭಿಸಲಿದೆ.

ಅಧಿವೇಶನದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಸರ್ಕಾರದ ಅಧಿಕಾರಿಗಳು ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಾರೆ. ಹೀಗಾಗಿ ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಇಂಡಿಗೊ ಏರ್ ಲೈನ್ಸ್ ಸಂಸ್ಥೆ ಬೆಂಗಳೂರು ಹಾಗೂ ಬೆಳಗಾವಿ ನಡುವೆ ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನ ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು 7 ಗಂಟೆಗೆ ಬೆಳಗಾವಿ ತಲುಪಲಿದೆ ಬೆಳಿಗ್ಗೆ 7:30ಕ್ಕೆ ಬೆಳಗಾವಿಯಿಂದ ಹೊರಟು 8:30ಕ್ಕೆ ಬೆಂಗಳೂರು ತಲುಪಲಿದೆ. ಈ ವಿಶೇಷ ವಿಮಾನ 189 ಆಸನಗಳನ್ನು ಹೊಂದ್ದೆ. ಅಧಿವೇಶನ ಮುಗಿದ ಬಳಿಕ ಡಿಸೆಂಬರ್ 20ರಿಂದ ATR72 ವಿಮಾನ ಸೇವೆ ಯಥಾ ಸ್ಥಿತಿಯಲ್ಲಿ ಮುಂದುವರೆಯಲಿವೆ.

 

For Latest News Updates, Join Our Whatsapp Community🚩
RELATED ARTICLES

Most Popular