HomeKarnatakaಬೆಳಗಾವಿ ವಿಧಾನಮಂಡಲ ಚಳಿಗಾಲ ಅಧಿವೇಶನ: ಅಗತ್ಯ ಸಿದ್ಧತೆಗೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ

ಬೆಳಗಾವಿ ವಿಧಾನಮಂಡಲ ಚಳಿಗಾಲ ಅಧಿವೇಶನ: ಅಗತ್ಯ ಸಿದ್ಧತೆಗೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ

ಬೆಳಗಾವಿ: ಪ್ರಸಕ್ತ ಸಾಲಿನ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧೀವೇಶನವನ್ನು ಕಳೆದ ಬಾರಿಯಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ ಫರೀದ್ ಅವರು ಸೂಚನೆ ನೀಡಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಬೆಳಗಾವಿ ಚಳಿಗಾಲ ಅಧಿವೇಶನದ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿದರು.

ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರುಗಳಿಗೆ ಯಾವುದೇ ರೀತಿಯ ಅನಾನೂಕುಲವಾಗದಂತೆ ನಿಗಾವಹಿಸಬೇಕು. ಅಧಿವೇಶನಕ್ಕೆ ಬರುವಂತಹ ಸಚಿವರು, ಶಾಸಕರು, ಸಚಿವಲಾಯದ‌ ಅಧಿಕಾರಿ, ಸಿಬ್ಬಂದಿಗಳು, ಚಾಲಕರಿಗೆ ಹಾಗೂ ಪೋಲಿಸ್ ಅಧಿಕಾರಿ ಸಿಬ್ಬಂದಿಗಳಿಗೆ ವ್ಯವಸ್ಥಿತ ವಸತಿ, ಊಟೊಪಹಾರದ ವ್ಯವಸ್ಥೆಯಾಗಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುವರ್ಣ ಸೌಧದ ಪ್ರವೇಶದ್ವಾರದಲ್ಲಿ ಜನ ಹಾಗೂ ಸಂಚಾರ ದಟ್ಟಣೆ ಆಗದಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಪ್ರತಿಭಟನಾ ಸ್ಥಳ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಿ ನಿರಂತರವಾಗಿ ನಿಗಾವಹಿಸಲು ತಿಳಿಸಿದರು.

ಅಧಿವೇಶನ‌ದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಸುವರ್ಣ ಸೌಧದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಲಾಪಗಳ‌ ವೀಕ್ಷಣೆಗೆ ಆಗಮಿಸುವ ಶಾಲೆಗಳ ವಿವರಗಳನ್ನು‌ ಮುಂಚಿತವಾಗಿ ನೀಡಬೇಕು. ಕಾಯುವಿಕೆ ಸಮಯದಲ್ಲಿ‌ ಮಕ್ಕಳಿಗೆ ನೆರಳಿನ ವ್ಯವಸ್ಥೆ ಮಾಡಬೇಕು.

ಕಳೆದ ಬಾರಿಯ ಅಧಿವೇಶನದಂತೆ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಅಚ್ಚುಕಟ್ಟಾಗಿ ಜರುಗಿಸಬೇಕು.‌ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವುದರ‌ ಮೂಲಕ ಚಳಿಗಾಲದ ಅಧಿವೇಶನವನ್ನು ಯಶಸ್ವಿಗಾಗಿ ಎಲ್ಲ‌ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಯು.ಟಿ. ಖಾದರ್ ಅವರು ತಿಳಿಸಿದರು.

ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು‌ ಮಾತನಾಡಿ, ಕಳೆದ‌ ಬಾರಿಯಂತೆ ಈ ಬಾರಿಯು ಪ್ರತಿದಿನ ಬೇರೆ ಬೇರೆ ಜಿಲ್ಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ಕಾರ್ಯಕ್ರಮಗಳಿಗೆ ಅಕ್ಕಪಕ್ಕದ‌ ಜಿಲ್ಲೆಗಳ ಕಲಾವಿದರಿಗೆ ಆದ್ಯತೆ ನೀಡಬೇಕು ಎಂದರು.

ಅಧಿವೇಶನದ ಸಂದರ್ಭದಲ್ಲಿ ಅಂತರ್ಜಾಲ‌ ವ್ಯವಸ್ಥೆಯಲ್ಲಿ ಯಾವುದೇ ಅಡತಡೆ ಆಗದಂತೆ‌ ನೋಡಿಕೊಳ್ಳಲು ಸೂಚಿಸಿದರು.  ಶಾಸಕರು, ಸಚಿವರುಗಳು ವಾಸ್ತವ್ಯ ಮಾಡುವಂತಹ ಹೊಟೆಲ್ ಗಳಲ್ಲಿ ಸಾರ್ವಜನಿಕರ‌ ಭೇಟಿಗೆ ಲಾಂಜ್ ವ್ಯವಸ್ಥೆ ಮಾಡಬೇಕು. ಈ ಕುರಿತು ಹೋಟೆಲ್‌ ಮಾಲಿಕರೊಂದಿಗೆ ಸಭೆ ಜರುಗಿಸಿ ಸೂಕ್ತ ನಿರ್ದೆಶನಗಳನ್ನು ನೀಡಲು ತಿಳಿಸಿದರು.

ಸುವರ್ಣ ಸೌಧದಲ್ಲಿ ಶಾಸಕರ‌ ಭವನ‌ ನಿರ್ಮಾಣ ಹಾಗೂ ನಿರಂತರ‌ ನೀರು‌‌‌ ಪೂರೈಕೆಗೆ ಸಂಬಂಧಿಸಿದಂತೆ ಯೋಜನೆಯನ್ನು ರೂಪಿಸಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ‌ ಮೊಹಮ್ಮದ್‌ ರೋಷನ್ ಅವರು‌ ಮಾತನಾಡಿ, ಸುವರ್ಣ ಸೌಧದಲ್ಲಿ ಸಚಿವರು, ಶಾಸಕರು, ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ವಾಹನ ಚಾಲಕರಿಗೆ ಹಾಗೂ ಪೋಲಿಸ್ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಊಟದ ವ್ಯವಸ್ಥೆ ಮಾಡಲಾಗುವದು. ಅಲ್ಲದೇ ಸುಮಾರು ನಾಲ್ಕು‌ ಖಾಸಗಿ ಕ್ಯಾಂಟಿನ್ ಗಳನ್ನು ತೆರೆಯಲಾಗುವುದು.

ಡಿ.ಸಿ.ಪಿ. ರೋಹನ್ ಜಗದೀಶ‌ ಕಳೆದ ಅಧಿವೇಶನಕ್ಕೆ ಅಂದಾಜು ಐದು ಸಾವಿರ ಪೋಲಿಸ್ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿ‌ ಹಾಗೂ ಸಿಬ್ಬಂದಿಗಳಿಗೆ ಅಚ್ವುಕಟ್ಟಾದ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಭಟನಾ ಸ್ಥಳಗಳಲ್ಲಿ ಅಗತ್ಯ ಪೋಲಿಸ್ ಬಂದೋಬಸ್ತ್ ಜೊತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ಸಭೆಯಲ್ಲಿ ಶಾಸಕರಾದ ರಾಜು(ಆಸೀಫ್)ಸೇಠ ಕರ್ನಾಟಕ ವಿಧಾನ ಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ,  ಜಿಲ್ಲಾ‌ ಪೊಲಿಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ, ಜಿಲ್ಲಾ ಪಂಚಾಯತ ಸಿ.ಇ.ಓ. ರಾಹುಲ್ ಶಿಂಧೆ, ಅಧಿಕಾರಿ ದಿನೇಶಕುಮಾರ್ ಮೀನಾ, ವಿವಿಧ ಇಲಾಖೆಗಳ‌ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಗೂ ಮುಂಚೆ ಸಭಾಧ್ಯಕ್ಷ ಯು.ಟಿ.ಖಾದರ‌್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣಸೌಧದ ವಿವಿಧ ಸಭಾಂಗಣಗಳನ್ನು ವೀಕ್ಷಿಸಿದರು‌. ಸ್ವಚ್ಛತೆ, ಆಸನಗಳ ನಿರ್ವಹಣೆ, ಪ್ರವೇಶ ದ್ವಾರದ ಬ್ಯಾಗೇಜ್ ಸ್ಕ್ಯಾನರ್ ಮತ್ತಿತರ ವ್ಯವಸ್ಥೆಗಳನ್ನು ಮುಂಚಿತವಾಗಿ ಸಿದ್ಧವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular