HomeKarnatakaBREAKING: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ವೇಶ್ಯಾವಾಟಿಕೆ ಆರೋಪದ ಮೇಲೆ ಮಹಿಳೆ ಬಟ್ಟೆ ಹರಿದು ಹಲ್ಲೆ

BREAKING: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ವೇಶ್ಯಾವಾಟಿಕೆ ಆರೋಪದ ಮೇಲೆ ಮಹಿಳೆ ಬಟ್ಟೆ ಹರಿದು ಹಲ್ಲೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಸಾರ್ವಜನಿಕವಾಗಿ ಮಹಿಳೆಯ ಬಟ್ಟೆಯನ್ನು ಹರಿದು ಹಾಕಿ ಹಲ್ಲೆ ನಡೆಸಲಾಗಿದೆ.

ಬೆಳಗಾವಿಯ ವಡ್ಡರವಾಡಿಯಲ್ಲಿ ಅಮಾನವೀಯ ಘಟನೆ ನಡೆದಿದೆ. ಮಗಳು ವೇಶ್ಯಾವಾಟಿಕೆ ಮಾಡುತ್ತಿದ್ದಾಳೆ ಎಂದು ಆರೋಪಿಸಿ ತಾಯಿ, ಮಗಳ ಮೇಲೆ ಹಲ್ಲೆ ಮಾಡಿ ಅಟ್ಟಹಾಸ ನಡೆಸಲಾಗಿದೆ.

ಬಾಲಕಿಯ ಜೊತೆ ನಾಲ್ಕು ವರ್ಷದಿಂದ ಮೂವರು ವಾಸವಾಗಿದ್ದರು. ಪಕ್ಕದ ಮನೆಯ ಅಷ್ಟೇಕರ್ ಕುಟುಂಬದಿಂದ ಹಲ್ಲೆ ಮಾಡಲಾಗಿದೆ. ಸಂಬಂಧ ಇಲ್ಲದವರೆಲ್ಲ ಮನೆಗೆ ಬಂದು ಹೋಗುತ್ತಾರೆ. ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದೀರಿ ಎಂದು ಹಲ್ಲೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಯಿ, ಮಗಳನ್ನು ಮನೆ ಬಿಡಿಸಲು ಜಗಳ ತೆಗೆದು ಹಲ್ಲೆ ಮಾಡಲಾಗಿದೆ ಎನ್ನಲಾಗಿದ್ದು, ತಮಗೆ ಜೀವ ಭಯ ಇದೆ ರಕ್ಷಣೆ ಕೊಡಿ ಎಂದು ಸಂತ್ರಸ್ತರು ಮನವಿ ಮಾಡಿದ್ದಾರೆ. ಹಲ್ಲೆಯ ಬಳಿಕ ನ್ಯಾಯಕ್ಕಾಗಿ ಎರಡು ದಿನ ಠಾಣೆಗೆ ಅಲೆದಾಡಿದರೂ ಸ್ಪಂದನೆ ದೊರೆತಿಲ್ಲ. ಬೆಳಗಾವಿ ಕಮಿಷನರ್ ಗೆ ದೂರು ನೀಡಿದ ಬಳಿಕ ನಿನ್ನೆ ರಾತ್ರಿ ಮೂವರ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ಕೇಸು ದಾಖಲಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular