HomeKarnatakaಗಣಪತಿ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಗಣಪತಿ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ: ಗಣಪತಿ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ನಡೆದಿದೆ.

ಮಚ್ಚೆ ಗ್ರಾಮದ ವಿಶ್ವೇಶ್ ನಾಯಕ್(20) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಗಣಪತಿ ವಿಸರ್ಜನೆ ಮಾಡಲು ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವಿಶ್ವೇಶ್ ಗಣಪತಿಯನ್ನು ಕೆರೆಯಲ್ಲಿ ವಿಸರ್ಜನೆ ಮಾಡಿ ವಾಪಸ್ ಬರುವಾಗ ಕೆರೆ ನೀರಿನಲ್ಲಿ ಮುಳುಗಿದ್ದಾನೆ.

ಕೆರೆಯಲ್ಲಿ ಮುಳುಗುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಗನ ಕಳೆದುಕೊಂಡ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಶವ ಹೊರ ತೆಗೆದಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ಕಸ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ ಸೂಚನೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ತಮ್ಮ ಕಾರ್ಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಅಪಡೇಟ್ ಮಾಡಬೇಕು ಹಾಗೂ ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಸೂಚಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಸ್ವಚ್ಚತಾ ಹೀ ಸೇವಾ ಅಭಿಯಾನದ ಸ್ವಚ್ಚತೆಯಲ್ಲಿ ಸಹಭಾಗಿತ್ವ, ಸ್ವಚ್ಚ ಭಾರತ ವಿಕಸಿತ ಭಾರತ ಕುರಿತು ಸಭೆ ಜರುಗಿಸಿ, ಮಾತನಾಡಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕೈಗೊಳ್ಳುತ್ತಿರುವ ಸ್ವಚ್ಛತಾ ಕಾರ್ಯಕ್ರಮಗಳು ಹಾಗೂ ನಗರ ಅಭಿವೃದ್ಧಿ ಯೋಜನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರವಾಗುವ ‘ಸ್ವಚ್ಛತಾ ಸೇವಾ’ ಮುಂತಾದ ವಿಶೇಷ ಅಭಿಯಾನಗಳನ್ನು ಅಂತರ್ ಜಾಲದಲ್ಲಿ ಅಪಡೇಟ್ ಮಾಡಬೇಕು, ರಸ್ತೆಗಳಲ್ಲಿನ ಕಸ ವಿಲೇವಾರಿಯು ಪ್ರತ್ಯಕ್ಷವಾಗಿ ಸಾರ್ವಜನಿಕರಿಗೆ ಕಾಣಿಸುವಂತಾಗಬೇಕು. ಆನ್‍ಲೈನ್ ಸುದ್ದಿ ಮತ್ತು ಸ್ಥಳದಲ್ಲಿನ (ಆನ್-ಗ್ರೌಂಡ್) ಕೆಲಸಗಳು ಪರಸ್ಪರ ಹೊಂದಾಣಿಕೆಯಾದಾಗ ಮಾತ್ರ ಪಾಲಿಕೆಯ ಕೆಲಸಗಳ ಬಗ್ಗೆ ಜನರಲ್ಲಿ ನಂಬಿಕೆ ಮೂಡುತ್ತದೆ ಎಂದು ಅವರು ಹೇಳಿದರು.

ಬಡವರು ಮತ್ತು ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಜನರ ಮನೆಗಳಲ್ಲಿ ಕಸವನ್ನು ಮನೆಯೊಳಗೆ ಇಟ್ಟುಕೊಳ್ಳಲು ಅವರಿಗೆ ಪ್ರತ್ಯೇಕ ಜಾಗವಿಲ್ಲ. ಇದರಿಂದಾಗಿ ಅವರು ಕಸವನ್ನು ಹೊರಗೆ ಎಸೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆ ಕುರಿತು ಕಸದ ಸಂಗ್ರಹಣಾ ವಾಹನದ ಬಗ್ಗೆ ಅಥವಾ ಬೇರೆ ವ್ಯವಸ್ಥೆಯ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಲು ಅಧಿಕಾರಿಗಳಿಗೆ ಸೂಚಿಸಿದರು. 

ಕಸ ಸಂಗ್ರಹಣಾ ವಾಹನಗಳನ್ನು ನಿಗದಿತ ಸಮಯಕ್ಕೆ ಕಳುಹಿಸಬೇಕು ಮತ್ತು ಅಗತ್ಯವಿದ್ದರೆ ಪ್ರತಿ 2 ಗಂಟೆಗೊಮ್ಮೆ ಕಸ ಸಂಗ್ರಹಿಸುವ ವ್ಯವಸ್ಥೆಯನ್ನು ಮಾಡಬೇಕು. ನಿರ್ದಿಷ್ಟ ಸ್ಥಳಗಳಲ್ಲಿ ಸ್ಥಿರ ಕಸದ ಬುಟ್ಟಿಗಳನ್ನು ಇಟ್ಟು, ಜನರು ಅದರಲ್ಲಿ ಕಸ ಹಾಕುವಂತೆ ಪ್ರೇರೇಪಿಸುವ ಯೋಜನೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. 

ಸಾರ್ವಜನಿಕರು ಒಣ ಹಾಗೂ ಹಸಿ ತ್ಯಾಜ್ಯವನ್ನು ವಿಂಗಡಿಸಿ ಹಾಕಲು ಸೂಕ್ತವಾದ ವಿಲೇವಾರಿ ಕೇಂದ್ರಗಳನ್ನು ನಿರ್ಮಿಸಬೇಕು. ಪ್ರತಿ ಮನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸುವ ವ್ಯವಸ್ಥೆ ಮಾಡಬೇಕು. ಅದಕ್ಕಾಗಿ ಎಲ್ಲರಿಗೂ ಪ್ರತ್ಯೇಕವಾದ ಕಸದ ತೊಟ್ಟಿಗಳನ್ನು ಒದಗಿಸುವಂತೆ ಸೂಚಿಸಿದರು.

ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಾಣಕ್ಕೆ ವಿನೂತನ ಯೋಜನೆಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಹಲವಾರು ಕಡೆಗಳಲ್ಲಿ ತ್ಯಾಜ್ಯ ಹಾಗೂ ಕಟ್ಟಡ ತ್ಯಾಜ್ಯಗಳು ಬಿದ್ದುಕೊಂಡಿರುವುದು ಕಂಡುಬಂದಿದ್ದು, ಕೆಲವು ಕಡೆ ಮಾತ್ರ ಸ್ವಚ್ಛಗೊಳಿಸಿ ಉಳಿದ ಭಾಗಗಳನ್ನು ಹಾಗೆಯೇ ಬಿಡಲಾಗುತ್ತಿದೆ ಈ ಕುರಿತು ಸರಿಯಾದ ವರದಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ತಾಲೂಕಿನ ಹಳ್ಳಿಗಳಲ್ಲಿ ಎಲ್ಲೆಡೆ ಕಸ ಕಂಡುಬರುತ್ತಿರುವುದು ಆತಂಕಕಾರಿಯಾಗಿದೆ. ಒಂದು ಹಳ್ಳಿಯಲ್ಲೂ ಸಮರ್ಪಕ ತ್ಯಾಜ್ಯ ನಿರ್ವಹಣೆ ನಡೆಯುತ್ತಿಲ್ಲ. ಎಲ್ಲ ಅಧಿಕಾರಿಗಳು ಜವಾಬ್ದಾರಿಯಿಂದ ತಂಡವಾಗಿ ಕಾರ್ಯನಿರ್ವಹಿಸಿ ಗ್ರಾಮಗಳನ್ನು ಸ್ವಚ್ಛವಾಗಿಡಲು ಕ್ರಮ ಕೈಗೊಳ್ಳಬೇಕು. ಮಿಶ್ರ ಕಸ ನೀಡುತ್ತಿರುವ ಪ್ರದೇಶಗಳಲ್ಲಿ ಸಂಬಂಧಿಸಿದವರಿಗೆ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಖಾಸಗಿ ಸಂಘ ಸಂಸ್ಥೆಗಳು ಸ್ವಯಂಪ್ರೇರಿತರಾಗಿ ರಸ್ತೆ ಬದಿಯಲ್ಲಿರುವ ಕಸವನ್ನು ಸ್ವಚ್ಛಗೊಳಿಸಿದರೆ, ಅಂತಹ ಸಂಸ್ಥೆಗಳಿಗೆ ಬೇಕಾದ ಉಪಕರಣಗಳು, ಸೌಲಭ್ಯಗಳನ್ನು ನೀಡಿ ಸಹಾಯ ಒದಗಿಸಬೇಕು ಹಾಗೂ ಅವರನ್ನು ಗೌರವಿಸಿ, ಸನ್ಮಾನಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಸದಿಂದ ಈಗಲೇ ದೊಡ್ಡ ಮಟ್ಟದ ರೋಗಗಳು ಕಾಣಿಸದಿದ್ದರೂ, ಮುಂದಿನ ದಿನಗಳಲ್ಲಿ ಅದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಆದ್ದರಿಂದ ತ್ಯಾಜ್ಯ ನಿರ್ವಹಣೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅವರು ಹೇಳಿದರು. 

ಸಭೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಜಿ.ಪಂ. ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಎಲ್ಲ ತಾಲೂಕಿನ ತಹಶೀಲ್ದಾರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular