HomeLatest Newsಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ABVP ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ

ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ABVP ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ

ಬೆಳಗಾವಿ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಸಂಘಟನೆ (ಎಬಿವಿಪಿ) ನೇತೃತ್ವದಲ್ಲಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಅಲಿ ನಡೆಸಲಾಯಿತು.

ಬೆಳಗಾವಿಯ ಸರ್ದಾರ್ ಮೈದಾನದಿಂದ ಪಾದಯಾತ್ರೆ ಮೂಲಕ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಎಬಿವಿಪಿ ಕಾರ್ಯಕರ್ತರು ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಬರಬೇಕೆಂದು ಎಬಿವಿಪಿ ಕಾರ್ಯಕರ್ತರು ಪಟ್ಟುಹಿಡಿದರು. ಅನುಮತಿ ಇಲ್ಲದೇ ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆಯಿತು. ಪ್ರತಿಭಟನೆ ನಿಲ್ಲುವಂತೆ ಹೇಳಿದರೂ ಬಗ್ಗದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.50ಲಕ್ಷಕ್ಕೂ ಹೆಚ್ಚಿನ ಹುದ್ದೆಗಳು  ಖಾಲಿ ಇದ್ದು, ಕಳೆದ ಐದು ವರ್ಷಗಳಿಂದ ನೇಮಾಕತಿ ಮಾಡಿಕೊಂಡಿಲ್ಲ. ಸರ್ಕಾರದ ವಿಳಂಬ ಧೋರಣೆ ಖಂಡನೀಯ ಎಂದು ಪ್ರತಿಭಟನಾಕಾತ್ರರು ಕಿಡಿಕಾರಿದರು.

ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ನೇಮಕಾತಿ ಮಾಡಿಕೊಳ್ಳಫ಼್ದೇ ಮುಂದೂಡುತ್ತಿರುವುದು ಯುವಕ ಭವಿಷ್ಯಕ್ಕೆ ಕುತ್ತುತಂದಿದೆ. ತಕ್ಷಣ ನೇಮಕಾತಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular