ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನಲ್ಲಿ ಈ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದಿಂದ ಜಮಖಂಡಿಗೆ ತೆರಳುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದ ಭೀಕರತೆಗೆ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪತಿ, ಪತ್ನಿ ಹಾಗೂ ಮಗಳು ಮೂವರು ಮೃತಪಟ್ಟಿದ್ದಾರೆ. ಪತಿ ಗಿರೆಪ್ಪ, ಪತ್ನಿ ಮಂಜುಳಾ ಹಾಗೂ ಮಗಳು ಆರಾಧ್ಯ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

