HomeKarnatakaಬೈಕ್ ಸವಾರರ ಮೇಲೆ ಹರಿದ ಬಸ್; ಮಹಿಳೆ ಸ್ಥಳದಲ್ಲೇ ದುರ್ಮರಣ; ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ...

ಬೈಕ್ ಸವಾರರ ಮೇಲೆ ಹರಿದ ಬಸ್; ಮಹಿಳೆ ಸ್ಥಳದಲ್ಲೇ ದುರ್ಮರಣ; ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ

ಬೆಳಗಾವಿ: ಬೈಕ್ ಸವಾರರ ಮೇಲೆಯೇ ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ.

ದಿನಸಿ, ತರಕಾರಿ ಚೀಲವನ್ನು ಹೆಗಲ ಮೇಲೆ ಹೊತ್ತು ಬರುತ್ತಿದ್ದ ವೃದ್ಧನ ಕೈಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್ ಸವಾರರ ಮೇಲೆ ಹಿಂದಿನಿಂದ ಬಂದ ಬಸ್ ಹರಿದಿದ್ದು, ಬೈಕ್ ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡ ಮೂಲದ ವಿದ್ಯಾಶ್ರೀ (32) ಮೃತ ಮಹಿಳೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಎರಡು ದಿನಗಳ ಹಿಂದೆ ನಡೆದಿದ್ದ ಅಪಘಾತ ತಡವಾಗಿ ಬೆಳಕಿಗೆ ಬಂದಿದ್ದು, ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular