ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ಕು ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.
ಗೋಕಾಕ್ ನ ಕರೆಮ್ಮ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಸೈಫ್ ಮುಲ್ಲಾ (29), ಮಗಳು ಸಿಜಾ (4) ಹಾಗೂ ಇಮ್ತಿಯಾಜ್ (35) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

