HomeLatest NewsBIG NEWS: ಬೆಳಗಾವಿಯ ಚೋರ್ಲಾ ಘಾಟ್ ನಲ್ಲಿ 400 ಕೋಟಿ ದರೋಡೆ ಪ್ರಕರಣ: ಪ್ರಮುಖ ಆರೋಪಿ...

BIG NEWS: ಬೆಳಗಾವಿಯ ಚೋರ್ಲಾ ಘಾಟ್ ನಲ್ಲಿ 400 ಕೋಟಿ ದರೋಡೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ಬೆಳಗಾವಿ: ಬೆಳಗಾವಿಯ ಚೋರ್ಲಾ ಘಾಟ್​ನಲ್ಲಿ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಎಸ್ ಐಟಿ ಅಧಿಕಾರಿಗಳು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ತನಿಖೆ ಚುರುಕುಗೊಳಿಸಲಾಗಿದ್ದು, ಪ್ರಕರಣದ ಸತ್ಯಾಂಶಗಳು ಹೊರಬರಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ-ಮಹಾರಾಷ್ಟ್ರ ಗಡಿಯ ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿದ್ದ ಅಂದಾಜು 400 ಕೋಟಿ ರೂ. ಮೌಲ್ಯದ ರದ್ದಾದ ನೋಟುಗಳ ದರೋಡೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಕಿಶೋರ್ ಸಾಳ್ವೆ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದು, ಬಳಿಕ ಆತನನ್ನು ಬಂಧಿಸಲಾಗಿದೆ.

ದೂರುದಾರ ಸಂದೀಪ್ ಪಾಟೀಲ್ ಅವರ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಎಸ್‌ಐಟಿ ಪರಿಶೀಲನೆ ನಡೆಸಿದೆ.

ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ ಪ್ರದೇಶದಲ್ಲಿ 2025 ರ ಅಕ್ಟೋಬರ್ 25 ರಂದು ಎರಡು ಕಂಟೇನರ್‌ಗಳಲ್ಲಿದ್ದ ಸುಮಾರು 400 ಕೋಟಿ ರೂ. ಹಣವನ್ನು ದರೋಡೆ ಮಾಡಲಾಗಿತ್ತು ಎಂದು ಮಹಾರಾಷ್ಟ್ರದ ನಾಸಿಕ್ ಮೂಲದ ಉದ್ಯಮಿ ಸಂದೀಪ್ ಪಾಟೀಲ್ ಮಹಾರಾಷ್ಟ್ರದ ನಾಸಿಕ್ ಪೊಲೀಸರಿಗೆ ದೂರು ನೀಡಿದ್ದರು. ಇದರಿಂದ ಪ್ರಕರಣ ಬೆಳಕಿಗೆ ಬಂದಿದೆ. ದೂರುದಾರ ಸಂದೀಪ್ ಪಾಟೀಲ್ ಹೇಳುವ ಪ್ರಕಾರ ದರೋಡೆಯಾದ ಹಣವು ಗುಜರಾತ್ ಮೂಲದ ಬಿಲ್ಡರ್ ಕಿಶೋರ್ ಸವಲಾ ಸೇಠ್‌ ಅವರಿಗೆ ಸೇರಿದ್ದು, ಅದರಲ್ಲಿ ರದ್ದಾದ 2,000 ರೂ. ಮುಖಬೆಲೆಯ ನೋಟುಗಳೂ ಇದ್ದವು ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular