HomeKarnatakaವರದಕ್ಷಿಣೆ ಕಿರುಕುಳ: ತವರು ಮನೆಯವರೊಂದಿಗೆ ಮಾತನಾಡಲು ಬಿಡದೇ ಹಿಂಸೆ: ಮನನೊಂದ ಮಹಿಳೆ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳ: ತವರು ಮನೆಯವರೊಂದಿಗೆ ಮಾತನಾಡಲು ಬಿಡದೇ ಹಿಂಸೆ: ಮನನೊಂದ ಮಹಿಳೆ ಆತ್ಮಹತ್ಯೆ

ಬೆಳಗಾವಿ: ಶೈಕ್ಷಣಿಕವಾಗಿ, ಕಾನೂನಾತ್ಮಕವಾಗಿ ಪ್ರಪಂಚ ಎಷ್ಟೇ ಮುಂದುವರೆದಿದ್ದರೂ ವರದಕ್ಷಿಣೆ ಕಿರುಕುಳ ಎಂಬ ಪಿಡುಗು ಮಾತ್ರ ಇನ್ನೂ ನಿಂತಿಲ್ಲ. ಪತಿ ಹಾಗೂ ಮನೆಯವರ ವರದಕ್ಷಿಣೆ ಕಿತುಕುಳಕ್ಕೆ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

ಪತಿ-ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ವರದಕ್ಷಿಣೆ ಕಿರುಕುಳ ಕೌಟುಂಬಿಕ ಕಲಹಕ್ಕೆ ಬೇಸತ್ತ ಶ್ರೀನಿಧಿ, ಮನೆಯ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರಿಲ್‌ಗೆ ವೇಲ್ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತಿ ಸಂತೋಷ್ ಕುಟುಂಬದವರು ಶ್ರೀನಿಧಿ ತವರು ಮನೆಯವರೊಂದಿಗೆ ಮಾತನಾಡಬಾರದೆಂದು ಮೊಬೈಲ್ ಫೋನ್ ಕಿತ್ತುಕೊಂಡಿದ್ದರಂತೆ. ಪತಿ, ಅತ್ತೆ ಶ್ರೀನಿಧಿಗೆ ಇನ್ನಿಲ್ಲದ ಹಿಂಸೆ ನೀಡಿದ್ದಾರೆ ಎಂದು ಶ್ರೀನಿಧಿ ಪೋಷಕರು ಆರೋಪಿಸಿದ್ದಾರೆ.

ಗಂಡ, ಅತ್ತೆ ಹಾಗೂ ಇನ್ನಿಬ್ಬರೂ ಸಂಬಂಧಿಕರ ವಿರುದ್ಧ ಶ್ರೀನಿಧಿ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ. ಘಟನೆ ಸಂಬಂಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿ ಸಂತೋಷ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669


For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular