ಬೆಳಗಾವಿ: ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅವ್ಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತಿಗಳು ಬೆಂಕಿಗಾಹುತಿಯಾಗಿವೆ. ಯಂತ್ರೋಪಕರಣಗಳಿಗೂ ಹಾನಿಯಾಗಿವೆ. ತಡರಾತ್ರಿ ಕಾರ್ಖಾನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಪ್ಲಾಸ್ಟಿಕ್ ವಸ್ತುಗಳು ಹೆಚ್ಚಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಯಾದ್ಯಂತ ವ್ಯಾಪಿಸಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಕಿ ಪಕ್ಕದ ಕಾರ್ಖಾನೆಗಳಿಗೆ ಹರಡಿಲ್ಲ. ಹಾಗಾಗಿ ದೊಡ್ಡ ಮಟ್ಟದ ಅನಾಹುತ ತಪ್ಪಿದಂತಾಗಿದೆ. ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕಾರ್ಖಾನೆಯಲ್ಲಿದ್ದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಹಾಗೂ ಸಿದ್ಧಪಡಿಸಿದ ಉತ್ಪನ್ನಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

