ಬೆಳಗಾವಿ: ಬೆಳಗಾವಿಯಲ್ಲಿ ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರೈತರ ಹೋರಾಟ ತೀವ್ರಗೊಂಡಿದೆ. ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಅಹೋರಾತ್ರಿ ಧರಣಿ 7ನೇ ದಿನಕ್ಕೆ ಕಾಲಿಟ್ಟಿದೆ.
ಇಂದು ಹೋರಾಟ ಮತ್ತಷ್ಟು ತೀವ್ರಗೊಳಿಸುವುದಾಗಿ ರೈತರು, ಕಬ್ಬು ಬೆಳೆಗಾರರು ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರಗ್ರಾಮದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಬಾಗಲಕೋಟೆ-ನಿಪ್ಪಾಣಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡುವಂತೆ ರೈತರು ಪಟ್ಟು ಹಿಡ್ದಿದ್ದಾರೆ. ರೈತರ ಹೋರಾಟಕ್ಕೆ ಬಿಜೆಪಿ ಮುಖಂಡರು, ನಾಯಕರು ಕೂಡ ಸಾಥ್ ನೀಡಿದ್ದಾರೆ.
