HomeKarnatakaBREAKING: ಮದುವೆಯಾಗಲು ಹುಡುಗಿ ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಜೈಲು ವಾರ್ಡರ್

BREAKING: ಮದುವೆಯಾಗಲು ಹುಡುಗಿ ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಜೈಲು ವಾರ್ಡರ್

ಬೆಳಗಾವಿ: ಬೆಳಗಾವಿ ಜಿಲೆಯ ಹಿಂಡಲಗಾ ಕಾರಾಗೃಹದ ವಾರ್ಡರ್ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ನಿವಾಸಿ ವಿನೋದ ಭೀಮಪ್ಪ ತಿಗಡಿ (31) ಮೃತ ವ್ಯಕ್ತಿ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವಾರ್ಡರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಇದ್ದಕ್ಕಿದ್ದಂತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಇತ್ತೀಚೆಗಷ್ಟೇ ವಿನೋದ್ ಹೊಸ ಮನೆ ಕೂಡ ಕಟ್ಟಿಸಿದ್ದರು. ವಿನೋದ್ ಮದುಗಾಗಿ ಮನೆಯಲ್ಲಿ ಹುಡುಗಿ ಹುಡುಕುತ್ತಿದ್ದರು. ಆದರೆ ಎಷ್ಟೇ ಪ್ರಯತ್ನ ಮಾಡಿದರೂ ಹುಡುಗಿ ಸಿಗುತ್ತಿರಲಿಲ್ಲ. ಇದರಿಂದ ತೀವ್ರವಾಗಿ ಮನನೊಂದಿದ್ದರು ಎನ್ನಲಾಗಿದೆ. ಜೀವನದಲ್ಲಿ ಜಿಗುಪ್ಪೆಗೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಚನ್ನಮ್ಮ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular