HomeKarnatakaಡಿವೈಎಸ್ ಪಿ, ಪಿಎಸ್ಐ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಡಿವೈಎಸ್ ಪಿ, ಪಿಎಸ್ಐ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಬೆಳಗಾವಿ: ವ್ಯಕ್ತಿಯೋರ್ವ ಡಿವೈ ಎಸ್ ಪಿ, ಪಿಎಸ್​ಐ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ.

ಬೆಂಡಿಗೇರಿ ಗ್ರಾಮದ ರವೀಂದ್ರ ದಾನವ್ವಗೋಳ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದ ಹೆದರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರವೀಂದ್ರ ಡೆತ್​​ ನೋಟ್​​ನಲ್ಲಿ ಉಲ್ಲೇಖಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಪೊಲೀಸರು ಕೂಡ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದು, ಪೊಲೀಸ್ ಅಧಿಕಾರಿಗಳ ಹೆಸರು ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರವೀಂದ್ರ, ಲಕ್ಷ್ಮಣ್ ಚಂದರಗಿ ಮತ್ತು ಭರಮಪ್ಪ‌ ಪೂಜಾರಿ ಎಂಬುವರಿಗೆ 8 ಲಕ್ಷ ರೂಪಾಯಿ ಸಾಲ ನೀಡಿದ್ದರು. ಆದ್ರೆ, ಈ ಹಣವನ್ನು ಲಕ್ಷ್ಮಣ್ ಚಂದರಗಿ ಮತ್ತು ಭರಮಪ್ಪ‌ ಪೂಜಾರಿ ವಾಪಸ್ ಕೊಟ್ಟಿಲ್ಲ. ಬದಲಾಗಿ ಹಣ ಕೇಳಿದ್ದಕ್ಕೆ ರವೀಂದ್ರಗೆ ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ನ್ಯಾಯ ಕೊಡಿಸಿ ಎಂದು ರವೀಂದ್ರ, ಪಿಎಸ್‌ಐ ಆನಂದ, ಹಿಂದಿನ ಡಿವೈಎಸ್​​ಪಿ ಮುಲ್ಲಾಗೆ ಮನವಿ ಮಾಡಿದ್ದರಂತೆ. ಆದರೆ ಪೊಲೀಸರು ಸಹ ಈ ಬಗ್ಗೆ ನಿರ್ಲಕ್ಷ ಮಾಡಿದ್ದಾರೆ. ಸಾಲದ್ದಕ್ಕೆ ಪೊಲೀಸರು ಸಹ ಬೆದರಿಕೆ ಹಾಕಿದ್ದಾರೆ ಎಂದು ರವೀಂದ್ರ ಆತ್ಮಹತ್ಯೆಗೆ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ಬರೆಯಲಾಗಿದೆ.

ಘಟನಾ ಸ್ಥಳಕ್ಕೆ ಮೂಡಲಗಿ ಠಾಣಾ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೃತ ರವೀಂದ್ರ ದಾನವ್ವಗೋಳ ಪತ್ನಿ ದೂರಿನ ಮೇರೆಗೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular