HomeLatest NewsBIG NEWS: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ: ಮರ್ಮಾಂಗವನ್ನು ಕತ್ತರಿಸಿದ ದುಷ್ಕರ್ಮಿಗಳು

BIG NEWS: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ: ಮರ್ಮಾಂಗವನ್ನು ಕತ್ತರಿಸಿದ ದುಷ್ಕರ್ಮಿಗಳು

ಬೆಳಗಾವಿ: ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಲ್ಲದೇ ಆತನ ಮರ್ಮಾಂಗವನ್ನೂ ಕತ್ತರಿಸಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆದಿದೆ.

ಇಲ್ಲಿನ ಹಿರೇನಂದಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಬಳಿಯ ಮೆಕ್ಕೆಜೋಳದ ಗದ್ದೆಯಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಕಲ್ಮೇಶ್ ಕೋಟಿ (50) ಕೊಲೆಯಾದ ದುರ್ದೈವಿ.

ಕಲ್ಮೇಶ್ ತುಮಕೂರುನ ಹೋಂ ಕೇರ್ ನಲ್ಲಿ ಕೆಲಸ ಮಾಡುತ್ತಿದ್ದ. ಹತ್ತು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದ. ವೃದ್ಧ ತಾಯಿ ಜೊತೆ ವಾಸವಾಗಿದ್ದ. ಹತ್ತು ವರ್ಷಗಳ ಹಿಂದೆ ಪತ್ನಿ ಹಾಗೂ ಮಗ ಕೂಡ ಕಲ್ಮೇಶ್ ನನ್ನು ಬಿಟ್ಟು ಹೋಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತಿಯ ಕೊಲೆ ವಿಚಾರ ತಿಳಿದು ಪತ್ನಿ ಹಾಗೂ ಮಗ ಗ್ರಾಮಕ್ಕೆ ಆಗಮಿಸಿದ್ದಾರೆ. ಕೊಲೆಯಿಂದಾಗಿ ಹಿರೇಹಳ್ಳಿ ಗ್ರಾಮವೇ ಬೆಚ್ಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಸ್ತಿ ವಿಚಾರ, ಹಳೇ ದ್ವೇಷ, ಹೆಣ್ಣಿನ ವಿಚಾರವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular