ಬೆಳಗಾವಿ: ಹುಟ್ಟುತ್ತಾ ಅಣ್ಣ-ತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು ಎಂಬ ಮಾತಿದೆ. ಜಮೀನಿಗೆ ನೀರು ಹರಿಸುವ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಗಲಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಣ್ಣ-ತಮ್ಮನ ನಡುವೆ ಜಗಳವಾಗಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಯಲ್ಲಪ್ಪ ದೇಮಪ್ಪ ಸಣ್ಣಮ್ಮನವರ (45) ಕೊಲೆಯಾಗಿರುವ ವ್ಯಕ್ತಿ. ಮಹಾದೇವಪ್ಪ ದೇವಪ್ಪ ಸಣ್ಣಮ್ಮನವರ (55) ತಮ್ಮನನ್ನೇ ಕೊಂದ ಅಣ್ಣ,
ತಮ್ಮನ ಜೊತೆ ಜಗಳ ಮಾಡಿದ್ದ ಮಹಾದೇವಪ್ಪ, ಕೈಯಲ್ಲಿದ್ದ ಸಲಿಕೆಯಿಂದ ಹೋಡೆದು ಕೊಲೆ ಮಾಡಿದ್ದಾನೆ. ಮುರಗೋಡ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಆಗಮಿಸಿದ ಮುರಗೋಡ ಪೊಲೀಸರು ಆರೋಪಿ ಮಹಾದೇವಪ್ಪನನ್ನು ಬಂಧಿಸಿದ್ದಾರೆ.

