HomeKarnatakaಸಿದ್ದೇಶ್ವರ ಜಾತ್ರೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣ: 8 ಆರೋಪಿಗಳು ಅರೆಸ್ಟ್

ಸಿದ್ದೇಶ್ವರ ಜಾತ್ರೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣ: 8 ಆರೋಪಿಗಳು ಅರೆಸ್ಟ್

ಬೆಳಗಾವಿ: ಬೆಳಗಾವಿಯ ಹಣ್ಣಿಕೇರಿ ಗ್ರಾಮದ ಸಿದ್ದೇಶ್ವರ ಜಾತ್ರೆಯಲ್ಲಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈದಿದ್ದ ಪ್ರಕರಣ ಸಂಬಂಧ ನೆಸರಗಿ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

ಮಾರ್ಚ್ 31 ರಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದ ಸಿದ್ದೇಶ್ವರ ಜಾತ್ರೆಯಲ್ಲಿ ಮದ್ಯಪಾನ ಮಾಡಿ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈಯ್ಯಲಾಗಿತ್ತು. ಹಳೆಯ ವೈಷ್ಯಮಕ್ಕೆ ಕೊಲೆ ನಡೆದಿತ್ತು. ಸಂಗನಗೌಡ ಬಸನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ.

ಪ್ರಕರಣ ಸಂಬಂಧ ನೇಸರಗಿ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.  ದೇಮಪ್ಪ @ ಮುದಕಪ್ಪ ಬಸಲಿಂಗಪ್ಪ ಬಳಗನ್ನವರ (49), ಮಂಜುನಾಥ ಮಾರುತಿ ಬಳಗನ್ನವರ (27), ರುದ್ರಪ್ಪ ಚೂನಪ್ಪ @ ಶಿವನಪ್ಪ ಬಳಗನ್ನವರ  (36), ವಿಜಯ ಸುರೇಶ ಬಳಗನ್ನವರ (26), ಸೂರಪ್ಪ ಬಸಲಿಂಗಪ್ಪ ಬಳಗನ್ನವರ (56), ಸಿದ್ದಪ್ಪ ಬಸಪ್ಪ ಸಿಂಗಾಡಿ ವಯಸ್ಸು (21), ನಾಗರಾಜ ರಾಮಪ್ಪ ಬಳಗನ್ನವರ (26) ಹಾಗೂ ಬಸವಂತಪ್ಪ ಲಕ್ಷ್ಮಣ ಬಳಗನ್ನವರ  (45) ಬಂಧಿತ ಆರೋಪಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular