HomeKarnatakaಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಹಗ್ಗದಿಂದ ಕಟ್ತಿಹಾಕಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನಿಗೆ ಬೆಳಗಾವಿಯ ಪೋಕ್ಸೊ ನ್ಯಾಯಾಲಯ 30 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಬೆಳಗಾವಿ ತಾಲ್ಲೂಕಿನ ಬಿ.ಕೆ.ಕಗ್ರಾಳಿಯ ರುತೇಶ ಅನಿಲ ಬೋಸಲೆ (22) ಶಿಕ್ಷೆಗೆ ಒಳಗಾದ ಅಪರಾಧಿ. 2025ರ ಏಪ್ರಿಲ್‌ 10ರಂದು ಬಾಲಕಿಗೆ ಲಡ್ಡು ಕೋಡುತ್ತೆನೆ ಎಂದು ನಂಬಿಸಿ ಕರೆದೊಯ್ದು ಆಕೆಯನ್ನು ಹಗ್ಗದಿಂದ ಕಟ್ಟಿಹಾಕಿ ಅತ್ಯಾಚಾರವೆಸಗಿದ್ದ.

ವಿಷಯ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೇ ನಿನಗೆ ಮಾಡಿದಂತೆ ನಿನ್ನ ಅಕ್ಕನಿಗೂ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ. ಇದೇ ರೀತಿ ಬೆದರಿಸಿ ಬಾಲಕಿಯನ್ನು ಎರಡನೇ ಬಾರಿ ಕರೆದಿದ್ದ. ಬಾಲಕಿ ಹೋಗಿರಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಕೋಪಗೊಂಡಿದ್ದ ಆರೋಪಿ ಬಾಲಕಿಯನ್ನು ಕೂದಲು ಹಿಡಿದು ಎಳೆದುಕೊಂಡು ಹೋಗಿ ಇಟ್ಟಿಗೆಯಿಂದ ಹೊಡೆದು ಹಿಂಸಿಸಿದ್ದ. ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಬಾಲಕಿ ಮನೆಯಲ್ಲಿ ವಿಶಯ ಹೇಳಿದ್ದಳು. ಸಂತ್ರಸೆ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ತನಿಖಾಧಿಕಾರಿ ಸುರೇಶ ಪಿ. ಶಿಂಗಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 

ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ಕೋರ್ಟ್ ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ, ಅಪರಾಧಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 6 ರೂಪಾಯಿ ಲಕ್ಷ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular