BIG NEWS: ಇಲ್ಲಿ ಅಧಿವೇಶನ ನಡೆಸುತ್ತಿರುವುದು ಬೆಂಗಳೂರು ಸಮಸ್ಯೆ ಚರ್ಚಿಸಲು ಅಲ್ಲ; ಶಾಸಕ ಲಕ್ಷ್ಮಣ ಸವದಿ ಆಕ್ರೋಶ

ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ವಿಧನಮಂಡಲ ಅಧಿವೇಶ ಮೂರನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಅರಂಭವಾಗದ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ವಿರುದ್ಧ ಕಾಂಗ್ರೆಸ್ ಶಾಸಕರೇ ಕಿಡಿ ಕಾರಿದ್ದಾರೆ.

ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಚರ್ಚೆಯಾಗಲಿದ್ದು, ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹೇಳಿಕೆ ನೀಡಿದ್ದರು. ಎರಡು ದಿನಗಳಿಂದ ಬ್ರ್ಯಾಂಡ್ ಬೆಂಗಳೂರು, ಬೆಂಗಳೂರು ನಗರ ಸಮಸ್ಯೆ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ಮೂರನೇ ದಿನದ ಕಲಾಪ ಆರಂಭವಾಗಿ ಮಧ್ಯಾಹ್ನವಾಗುತ್ತಾ ಬಂದರೂ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆರಂಭವಾಗಿಲ್ಲ. ಇದರಿಂದ ಆಕ್ರೋಶಗೊಂಡ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಒತ್ತಾಯಿಸಿದರು.

ಇಲ್ಲಿ ಅಧಿವೇಶನ ನಡೆಸುತ್ತಿರುವುದು ಬೆಂಗಳೂರು ಸಮಸ್ಯೆ ಚರ್ಚಿಸಲು ಅಲ್ಲ. ಉತ್ತರ ಕರ್ನಾಟಕ ಭಾಗದ ಜನರ, ರೈತರ ಸಮಸ್ಯೆಗಳನ್ನು ಚರ್ಚಿಸಲು ಎಂದು ಗುಡುಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಯು.ಟಿ.ಖಾದರ್, ನೀವು ಕುಳಿತುಕೊಳ್ಳಿ. ಯಾರ ಪರವಾಗಿಯೂ ಮಾತನಾಡುವುದು ಬೇಕಿಲ್ಲ ಎಂದು ಟಾಂಗ್ ನೀಡಿದರು.

ಸ್ಪೀಕರ್ ಖಾದರ್ ಮಾತಿಗೆ ಸಿಟ್ಟಾದ ಉತ್ತರ ಕರ್ನಾಟಕ ಭಾಗದ ಶಾಸಕರು, ಮೊದಲು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ಕೊಡುವಂತೆ ಪಟ್ಟು ಹಿಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read