HomeKarnatakaBREAKING: ಹುಟ್ಟುಹಬ್ಬದ ದಿನವೇ ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

BREAKING: ಹುಟ್ಟುಹಬ್ಬದ ದಿನವೇ ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಬೆಳಗಾವಿ: ಬಿಎಸ್ ಸಿ ವಿದ್ಯಾರ್ಥಿನಿಯೊಬ್ಬಳು ಹುಟ್ಟುಹಬ್ಬದ ದಿನವೇ ಹಾಸ್ಟೇಲ್ ನಲ್ಲಿ ನೇಣಿಗೆ ಕೊರಳೊಡ್ಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಅಜಂ ನಗರದಲ್ಲಿ ಇರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ಕಾವೇರಿ ಉಮೇಶ ನಾಯಕ್ ( 21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಬೆಳಗಾವಿಯ ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ನಾಯಕ್, ಬಿಎಸ್ ಸಿ ಅಂತಿಮ‌ ವರ್ಷದಲ್ಲಿ ಓದುತ್ತಿದ್ದಳು. ಕಳೆದ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್ಸ್ ಟೇಬ್ ಲ್ ಓರ್ವರೊಂದಿಗೆ ಕಾವೇರಿಗೆ ಮದುವೆ ನಿಶ್ಚಯವಾಗಿ, ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಹುಟ್ಟುಹಬ್ಬದ ದಿನವೇ ಏಕಾಏಕಿ ಕಾವೇರಿ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular