HomeKarnatakaBIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ಪ್ರಕರಣ; ಸಿಐಡಿಗೆ ಹಸ್ತಾಂತರ

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ಪ್ರಕರಣ; ಸಿಐಡಿಗೆ ಹಸ್ತಾಂತರ

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ.

ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಕೆಲ ದಿನಗಳ ಹಿಂದೆ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಲಾಗಿತ್ತು. ಸಂತ್ರಸ್ತ ಮಹಿಳೆಯನ್ನು ಭಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಬೆಳಗಾವಿಯ ಕಾಕತಿ ಠಾಣೆ ಪೊಲೀಸರು 11 ಆರೋಪಿಗಳನ್ನು ಬಂಧಿಸಿದ್ದು, ಇನ್ನೋರ್ವ ಆರೋಪಿ ಪತ್ತೆಗಾಗಿ ಶೋಧ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಪ್ರಕರಣದ ತನಿಖೆಯನ್ನು ಡಿ.16ರಂದು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಪೊಲೀಸರು ಪ್ರಕರಣದ ಕಡತಗಳನ್ನು ಸಿಐಡಿ ಅಧಿಕಾರಿಗಳಿಗೆ ಅದಿಕೃತವಾಗಿ ಹಸ್ತಾಂತರಿಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular