ಬೆಂಗಳೂರು: ಬೇಲೆಕೇರಿ ಬಂದರಿನ ಮೂಲಕ ಕಬ್ಬಿಣದ ಅದಿರು ಅಕ್ರಮ ಸಾಗಾಟ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಯಲ ಅಧಿಕಾರಿಗಳು ಕರ್ನಾಟಕ ಹಾಗೂ ಹರಿಯಾಣ ರಾಜ್ಯಗಳಲ್ಲಿ ದಾಳಿ ನಡೆಸಿದ್ದಾರೆ.
ಬೆಂಗಳೂರು, ಹೊಸಪೇಟೆ, ಹರಿಯಾಣದ ಗುರುಗ್ರಾಮ ಸೇರಿದಂತೆ 20 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಪ್ರಕರಣಗಳನ್ನು ತನಿಖೆ ಮಾಡಲು ಸುಪ್ರೀಂ ಕೋರ್ಟ್ ನಿರ್ದೇಶಿಸಿದ ಬಳಿಕ ಈ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ ಹಲವಾರು ಎಫ್ ಐಆರ್ ಗಳು ಮತ್ತು ಚಾರ್ಜ್ ಶೀಟ್ ಗಳಿಂದ ಹಣ ವರ್ಗಾವಣೆ ತನಿಖೆ ಹುಟ್ಟಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.