BREAKING: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆ ಹಿನ್ನೆಲೆ: ಸತೀಶ್ ಸೈಲ್ ಗೆ ಶಾಸಕ ಸ್ಥಾನ ಅನರ್ಹ ಭೀತಿ

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಸಾಲು ಸಾಲು ಜೈಲು ಶಿಕ್ಷೆ ಪ್ರಕಟವಾಗಿದ್ದು, ಶಾಸಕ ಸ್ಥಾನ ಅನರ್ಹ ಭೀತಿ ಶುರುವಾಗಿದೆ.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ಮೊದಲ ಕೇಸ್ ನಲ್ಲಿ ಶಾಸಕ ಸತೀಶ್ ಸೈಲ್ ಗೆ 5 ವರ್ಷ ಜೈಲು ಶಿಕ್ಷೆ, 2ನೇ ಕೇಸ್ ನಲ್ಲಿ 3 ವರ್ಷ ಜೈಲು ಶಿಕ್ಷೆ, 3ನೇ ಕೇಸ್ ನಲ್ಲಿ 7 ವರ್ಷ, ನಾಲ್ಕನೇ ಕೇಸ್ ನಲ್ಲಿ 5 ವರ್ಷ, 5ನೇ ಕೇಸ್ ನಲ್ಲಿ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಖಚಿತವಾಗಿದ್ದು, ಶಾಸಕ ಸ್ಥಾನಕ್ಕೆ ಕುತ್ತು ತಂದಿದೆ.

ನಿಯಮಗಳ ಪ್ರಕಾರ ಜನಪ್ರತಿನಿಧಿಗಳಿಗೆ ಯಾವುದೇ ಪ್ರಕರಣದಲ್ಲಿ ಎರಡು ವರ್ಷಕ್ಕಿಂತ ಹೆಚ್ಚು ಕಾಲ ಜೈಲು ಶಿಕ್ಷೆಯಾದರೆ ಅವರನ್ನು ಅನರ್ಹಗೊಳಿಸಲಾಗುತ್ತದೆ. ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read