HomeKarnatakaರೈತರಿಗೆ ಗುಡ್ ನ್ಯೂಸ್: ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ರಾಜ್ಯದಲ್ಲಿ 7 ಹೊಸ...

ರೈತರಿಗೆ ಗುಡ್ ನ್ಯೂಸ್: ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ

ಬೆಳಗಾವಿ: ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆ ನಡೆಸಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಅವರ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮ ವಹಿಸಲಾಗುತ್ತಿದೆ. ಯಾದಗಿರಿ, ಗದಗ, ವಿಜಯನಗರ, ಚಾಮರಾಜನಗರ, ಕೋಲಾರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಬೇಡಿಕೆಗಿಂತಲೂ ಹೆಚ್ಚು ಸರಬರಾಜು ಮಾಡಲಾಗಿದೆ. ಗೊಂದಲವಿಲ್ಲದಂತೆ ಬೀಜ, ರಸಗೊಬ್ಬರ ವಿತರಿಸಬೇಕು. ಕೃಷಿ ಪತ್ತಿನ ಸಹಕಾರ ಸಂಘಗಳ ನೆರವನ್ನು ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular