BIG NEWS: ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಕೆ

ಬೆಳಗಾವಿ: ಪ್ರಸ್ತುತ ರಾಜ್ಯ ಪಠ್ಯಕ್ರಮದ 6ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದರು.

ಪರಿಷತ್ ಸದಸ್ಯರಾದ ಎಂ.ಎಲ್.ಅನಿಲಕುಮಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಸೋಮವಾರ ಪರಿಷತನಲ್ಲಿ ಉತ್ತರಿಸಿದರು.

ಆರ್ ಟಿ ಇ ಕಾಯ್ದೆಯ ಅನುಷ್ಠಾನದಿಂದ 1 ರಿಂದ 8ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು; 8ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೂ ಯೋಜನೆಯನ್ನು ವಿಸ್ತರಿಸುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಬಡ ಮಕ್ಕಳಿಗೆ ಅನುಕೂಲವಾಗಲಿದ್ದು, ಸರ್ಕಾರವು ಈ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಚಿಂತಿಸಿದೆಯೇ; ಇಲ್ಲದಿದ್ದಲ್ಲಿ ಯಾವ ಕಾಲಮಿತಿಯೊಳಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎನ್ನುವ ಅನಿಲ್ ಕುಮಾರ ಅವರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಈ ಯೋಜನೆಯನ್ನು ವಿಸ್ತರಿಸುವ ಪ್ರಸ್ತಾವನೆಯು ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read