ಉಲ್ಬಣಗೊಂಡ ಬೆಳಗಾವಿ ಕಾಂಗ್ರೆಸ್ ಭಿನ್ನಮತ: ಸತೀಶ್ ಜಾರಕಿಹೊಳಿ ವಿರುದ್ಧ ತಿರುಗಿಬಿದ್ದ ಸವದಿ ಬೆಂಬಲಿಗರು

ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ಭಿನ್ನಮತ ಉಲ್ಬಣಗೊಂಡಿದೆ. ಅಥಣಿ ಶಾಸಕ ಲಕ್ಷ್ಮಣ ಸವದಿ ಬೆಂಬಲಿಗರು ಸಚಿವ ಸತೀಶ ಜಾರಕಿಹೊಳಿ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಅಥಣಿಯಲ್ಲಿ ಹಳಬರು, ಹೊಸಬರು ಎನ್ನದೆ ನಾವು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದೇವೆ. ದಾರಿಹೋಕರ ಮಾತು ಕೇಳಿದ ಸಚಿವರು ಶಾಸಕ ಲಕ್ಷ್ಮಣ ಸವದಿ ಅವರ ವಿರುದ್ಧ ಆರೋಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶಿವು ಗುಡ್ಡಾಪುರ ಹೇಳಿದ್ದಾರೆ.

ಚುನಾವಣೆಗೆ ಮೊದಲು ಚಿಕ್ಕೋಡಿ ಕ್ಷೇತ್ರವನ್ನು ಹಾಲುಮತ ಸಮಾಜಕ್ಕೆ ಬಿಟ್ಟು ಕೊಡುವುದಾಗಿ ಘೋಷಿಸಿದ್ದರು. ನಂತರ ತಮ್ಮ ಪುತ್ರಿಗೆ ಟಿಕೆಟ್ ಕೊಡಿಸಿದರು. ಈಗ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಆರೋಪಿಸಿದ್ದಾರೆ.

ಶಿವಾನಂದ ದಿವಾನಮಳ ಮಾತನಾಡಿ, ಅಥಣಿಯಲ್ಲಿ ಕೇಂದ್ರದ ಮಾಜಿ ಸಚಿವ ಶಂಕರನಂದ ಅವರ ನಂತರದ ಎಲ್ಲಾ ಲೋಕಸಭಾ ಚುನಾವಣೆಗಳಲ್ಲಿಯೂ ಬಿಜೆಪಿಗೆ ಹೆಚ್ಚುವರಿ ಮತಗಳು ಬಂದಿದ್ದು, ಈಗಲೂ ಅದೇ ಮುಂದುವರೆದಿದೆ. ಸಚಿವರ ಹೇಳಿಕೆ ಸರಿಯಲ್ಲ ಎಂದು ಹೇಳಿದ್ದಾರೆ.

ಲಕ್ಷ್ಮಣ ಸವದಿ ಬಹಿರಂಗವಾಗಿ ಬಿಜೆಪಿ ಪರವಾಗಿ ನಿಂತಿದ್ದರೆ ಕಾಗವಾಡ, ಅಥಣಿ ಕ್ಷೇತ್ರಗಳಲ್ಲಿ ಕನಿಷ್ಠ 75ರಿಂದ 85,000 ಮತಗಳು ಬಿಜೆಪಿಗೆ ಹೋಗುತ್ತಿದ್ದವು ಎಂದು ಹೇಳಿದ್ದಾರೆ.

ತೆಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಂ. ಖೊಬ್ರಿ ಮಾತನಾಡಿ, ಸಚಿವರು ಅನಗತ್ಯವಾಗಿ ಸಂಶಯ ಪಟ್ಟು ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ನೋವಾಗುವಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read