HomeKarnatakaBREAKING NEWS: ದರ್ಗಾ ಬಳಿ ಜಿಲೆಟಿನ್ ಕಡ್ಡಿಗಳು ಸ್ಫೋಟ: ಬೆಚ್ಚಿಬಿದ್ದ ಜನರು!

BREAKING NEWS: ದರ್ಗಾ ಬಳಿ ಜಿಲೆಟಿನ್ ಕಡ್ಡಿಗಳು ಸ್ಫೋಟ: ಬೆಚ್ಚಿಬಿದ್ದ ಜನರು!

ಬೆಳಗಾವಿ: ದರ್ಗಾ ಬಳಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹಿರೇಬಾಗೆವಾಡಿ ಬಳಿ ನಡೆದಿದೆ. ಏಕಾಏಕಿ ಸಂಭವಿಸಿದ ಸ್ಫೋಟಕ್ಕೆ ಜನರು ಭಯಭೀತರಾಗಿದ್ದಾರೆ.

ಉದಯ್ ಶಿವಕುಮಾರ್ ಎಂಬುವವರ ಕ್ರಷರ್ ನಲ್ಲಿ ಈ ಘಟನೆ ನಡೆದಿದೆ. ಕ್ರಷರ್ ಬಳಿ ಇರುವ ಗುಡ್ಡಕ್ಕೆ ಸ್ಥಳೀಯರು ಬೆಂಕಿ ಹಚ್ಚಿದ್ದರು. ಬೆಂಕಿಯ ಕಿಡಿ ಕ್ರಷರ್ ಶೆಡ್ ಗೆ ತಗುಲಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ.

ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular