BIG NEWS: ಗೋಮಾಳ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ಗಲಾಟೆ: ಗುಡಿಸಲುಗಳಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಬೆಳಗಾವಿ: ಗೋಮಾಳ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ಆರಂಭವಾದ ಜಗಳ ತಾರಕಕ್ಕೇರಿದ್ದು, ಗುಡಿಸಲುಗಳಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಗೋಮಾಳ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ಹಲವು ದಿನಗಳಿಂದ ಗಲಾಟೆ ನಡೆಯುತ್ತಿತ್ತು. ತಡರಾತ್ರಿ ದುಷ್ಕರ್ಮಿಗಳು ಗೋಮಾಳ ಜಾಗದಲ್ಲಿದ್ದ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಕೆನ್ನಾಲಿಗೆಗೆ ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.

ಸರ್ಕಾರಿ ಗೋಮಾಳ ಜಾಗದಲ್ಲಿ ಮಹಾದೇವ್ ಮಾದರ್ ಎಂಬುವವರು ಶೆಡ್ ಹಾಕಿಕೊಂಡಿದ್ದರು. ಬಳಿಕ 12 ಗುಂಟೆ ಗೋಮಾಳ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಿಸಿದ್ದರು. ಇದೇ ವಿಚಾರವಾಗಿ ಮಹಾವೀರ ಕುರಾಡೆ ಕುಟುಂಬದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ನಿನ್ನೆ ಕೂಡ ಇದೇ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಗುಡಿಸಲುಗಳಿಗೆ ಮಹಾವೀರ ಕುಟುಂಬದವರು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.

ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read