HomeKarnatakaBIG NEWS: 2 ಕೋಟಿ ವಿಮೆ ಹಣಕ್ಕಾಗಿ ಗ್ಲೂಕೋಸ್ ನಲ್ಲಿ ವಿಷಹಾಕಿ ಮಾಜಿ ಸೈನಿಕನ ಹತ್ಯೆ

BIG NEWS: 2 ಕೋಟಿ ವಿಮೆ ಹಣಕ್ಕಾಗಿ ಗ್ಲೂಕೋಸ್ ನಲ್ಲಿ ವಿಷಹಾಕಿ ಮಾಜಿ ಸೈನಿಕನ ಹತ್ಯೆ

ಬೆಳಗಾವಿ: 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಮಾಜಿ ಸೈನಿಕನನ್ನೇ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ನಡೆದಿದೆ.

ಸಂದೀಪ್ ಮಾಂಜರಿ (47) ಕೊಲೆಯಾದ ಮಾಜಿ ಸೈನಿಕ. ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಗ್ಲೂಕೋಸ್ ಬಾಟಲ್ ಗೆ ವಿಷ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಸ್ತೆ ಅಪಘಾತದಲ್ಲಿ ಗಾಯಗೊಂಡು ಸಂದೀಪ್ ಮಾಂಜರಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾಗಿದ್ದನ್ನೇ ದಾಳವನ್ನಾಗಿ ಮಾಡಿಕೊಂಡ ಆರೋಪಿಗಳು ಆಸ್ಪತ್ರೆಯಲ್ಲಿಯೇ ಕೊಲೆ ಮಾಡಿದ್ದಾರೆ.

ಹುಕ್ಕೇರಿಯಲ್ಲಿ ಮೂರು ತಿಂಗಳ ಹಿಂದೆ ನಡೆದಿದ್ದ ದೇವಿ ಜಾತ್ರೆಯಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದಾಗ ಸಂದೀಪ್ ಅಪಘಾತಕ್ಕೀಡಾಗಿದ್ದರು. ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸಂದೀಪ್ ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಪತಿ ಸಾವನ್ನಪ್ಪಿದರೆ 2 ಕೋಟಿ ವಿಮೆ ಹಣ ಬರುತ್ತದೆ ಎಂದು ಸಂಚು ರೂಪಿಸಿ ಕೊಲೆ ಮಾಡಿದ್ದಾಳೆ. ಸಂದೀಪ್ ಪತ್ನಿ ಸುಮಾ ಮಾಂಜರಿ ಹಾಗೂ ಆಕೆಯ ಪ್ರಿಯಕರ ಪುಂಡಲೀಕನಿಂದ ಕೃತ್ಯವೆಸಗಲಾಗಿದೆ ಎಂದು ಸಂದೀಪ್ ಕುಟುಂಬದವರು ಆರೋಪಿಸಿದ್ದಾರೆ.

ಗ್ಲೂಕೋಸ್ ಬಾಟಲ್ ನಲ್ಲಿ ವಿಷ ಹಾಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂದೀಪ್ ಸಾವಿನ ಬಗ್ಗೆ ಅನುಮಾನಗೊಂಡಿರುವ ಕುಟುಂಬಪೊಲೀಸರುಗೆ ದೂರು ನೀಡಿ ತನಿಖೆಗೆ ಒತ್ತಾಯಿಸಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಎಸಿ ಶ್ರವಣಕುಮಾರ್ ಸಮ್ಮುಖದಲ್ಲಿ ಹೂತಿಟ್ಟ ಶವ ಹೊರತೆಗೆದು ತನಿಖೆ ಕೈಗೊಳ್ಳಲಾಗಿದೆ, ಎಫ್ ಎಸ್ ಎಲ್ ನಿಂದ ವರದಿ ಬಂದ ಬಳಿಕ ಮುಂದುನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಂದೀಪ್ ಪತ್ನಿ ಸುಮಾ ಹಾಗೂ ಆಕೆಯ ಪ್ರಿಯಕರ ಪುಂಡಲೀಕನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular