HomeLatest NewsBREAKING: ಅನರ್ಹಗೊಂಡಿದ್ದ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಬಿಗ್ ರಿಲೀಫ್!

BREAKING: ಅನರ್ಹಗೊಂಡಿದ್ದ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಬಿಗ್ ರಿಲೀಫ್!

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಸದಸ್ಯರ ಸದಸ್ಯತ್ವ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನರ್ಹಗೊಂಡಿದ್ದ ಸದಸ್ಯರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಹಾಗೂ ಸದಸ್ಯರ ಅನರ್ಹತೆ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮಂಗೇಶ್ ಪವಾರ್, ಪಾಲಿಕೆ ಸದಸ್ಯ ಜಯಂತ್ ಸದಸ್ಯತ್ವ ರದ್ದು ಮಾಡಿ ಇತ್ತೀಚೆಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ರಾಜ್ಯ ಸರ್ಕಾರ ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಮಂಗೇಶ್ ಪವಾರ್ ಹಾಗೂ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಈ ಮೂಲಕ ಅನರ್ಹಗೊಂಡಿದ್ದ ಮಹಾನಗರ ಪಾಲಿಕೆ ಸದಸ್ಯರಿಗೆ ರಿಲೀಫ್ ಸಿಕ್ಕಂತಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular