HomeLatest NewsBIG NEWS: ವಿದ್ಯುತ್ ಬಿಲ್ ಪಾವತಿಸದ ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೆಸ್ಕಾಂ ಶಾಕ್: ಕಚೇರಿಯ ಕರೆಂಟ್...

BIG NEWS: ವಿದ್ಯುತ್ ಬಿಲ್ ಪಾವತಿಸದ ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೆಸ್ಕಾಂ ಶಾಕ್: ಕಚೇರಿಯ ಕರೆಂಟ್ ಕಟ್

ಬೆಳಗಾವಿ: ಹಲವು ತಿಂಗಳಿಂದ ವಿದ್ಯುತ್ ಬಿಲ್ ಪಾವತಿಸದೇ ನಿರ್ಲಕ್ಷ ತೋರಿದ್ದ ಸಬ್ ರಿಜಿಸ್ಟ್ರಾರ್ ಕಚೇರಿಯ ಕರೆಂಟ್ ಕಟ್ ಮಾಡಿ ಹೆಸ್ಕಾಂ ಅಧಿಕಾರಿಗಳು ಬಿಸಿ ಮುಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ನಗರದ ಸಬ್ ರಿಜಿಸ್ಟ್ರಾರ್ ಕಚೇರಿ ಕಳೆದ ನಾಲ್ಕು ತಿಂಗಳಿನಿಂದ ವಿದ್ಯುತ್ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡಿದೆ. 2 ಲಕ್ಷಕ್ಕೂ ಅಧಿಕ ಬಿಲ್ ಬಾಕಿ ಇದೆ. ಹಲವು ಬಾರಿ ಕರೆಂಟ್ ಬಿಲ್ ಪಾವತಿಸುವಂತೆ ಹೆಸ್ಕಾಂ ಸಿಬ್ಬಂದಿ ಸೂಚಿಸಿದರೂ ಉಪನೋಂದಣಿ ಕಚೇರಿ ಅಧಿಕಾರಿಗಳು ಬೇಜವಾಬ್ದಾರಿ ಮೆರೆದಿದ್ದಾರೆ. ಇದರಿಂದ ಬೇಸತ್ತ ಹೆಸ್ಕಾಂ ಸಿಬ್ಬಂದಿ ಉಪನೋಂದಣಿ ಕಚೇರಿಯ ವಿದ್ಯುತ್ ಸ್ಥಗಿತಗೊಳಿಸಿದ್ದಾರೆ.

ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಈಗ ಸಿಬ್ಬಂದಿಗಳು, ಸಾರ್ವಜನಿಕರು ಪರದಾಡುವಂತಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕರೆಂಟ್ ಇಲ್ಲದೇ ಕತ್ತಲೆ ಕೂಪವಾಗಿದೆ. ಸಾರ್ವಜನಿಕರು ಕಚೇರಿಗೆ ಬಂದು ಹಿಡಿಶಾಪ ಹಾಕಿ ತೆರಳುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇರುವ ಸಬ್ ರಿಜಿಸ್ಟ್ರಾರ್ ಕಚೇರಿ ಕಳೆದ ‌ 4 ತಿಂಗಳಿಂದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. 2 ಲಕ್ಷದ 31 ಸಾವಿರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಇದ್ದು, ಹಲವು ಬಾರಿ ಬಿಲ್ ಪಾವತಿಸುವಂತೆ ಎಚ್ಚರಿಕೆ ನೀಡಿದರೂ ಬಿಲ್ ಪಾವತಿಸಿಲ್ಲ. ಇದರಿಂದ ಹೆಸ್ಕಾಂ ಅಧಿಕಾರಿಗಳು ಸಬ್ ರಿಜಿಸ್ಟ್ರಾರ್ ಕಚೇರಿಯ ವಿದ್ಯುತ್ ಸ್ಥಗಿತಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular