HomeLatest NewsSHOCKING: ವಿಡಿಯೋ ಕಾಲ್ ಮಾಡುತ್ತಲೇ ಲೈವ್ ನಲ್ಲಿ ಆತ್ಮಹತ್ಯೆಗೆ ಶರಣಾದ ಮಹಿಳೆ

SHOCKING: ವಿಡಿಯೋ ಕಾಲ್ ಮಾಡುತ್ತಲೇ ಲೈವ್ ನಲ್ಲಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಬಳ್ಳಾರಿ: ಮಹಿಳೆಯೊಬ್ಬರು ವಿಡಿಯೋ ಕಾಲ್ ಮಾಡುತ್ತಲೇ ಲೈವ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ.

ಬಳ್ಳಾರಿಯ ಹುಸೇನ್ ನಗರದಲ್ಲಿ ಈ ಘಟನೆ ನಡೆದಿದೆ. ಮುನ್ನಿ (23) ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾದವರು. ಲೈವ್ ವಿಡಿಯೋ ಮಾಡುತ್ತ ಮಾತನಾಡುತ್ತಿದ್ದಾಗಲೇ ಮುನ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೌಟುಂಬಿಕ ಕಲಹದಿಂದ ನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತ ಮುನ್ನಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. ಬಳ್ಳಾರಿಯ ಗಾಂಧಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular