BIG NEWS: ಬಳ್ಳಾರಿಯಲ್ಲಿ 8 ತಿಂಗಳಲ್ಲಿ 23 ಬಾಣಂತಿಯರು ಸಾವು: ಆಘಾತಕಾರಿ ಮಾಹಿತಿ ಬಹಿರಂಗ

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಐವರು ಬಾಣಂತಿಯರ ಸಾವು ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಮತ್ತೊಂದು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ಬಳ್ಳಾರಿಯಲ್ಲಿ ಕಳೆದ 8 ತಿಂಗಳಲ್ಲಿ ಬರೋಬ್ಬರಿ 23 ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂಬ ಅಂಶ ಬಯಲಾಗಿದೆ. ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿರುವ ಆಡಿಟ್ ವರದಿಯಲ್ಲಿ ಈ ಬಗ್ಗೆ ಉಲ್ಲೇಖವಾಗಿದೆ.

2024ರ ಏಪ್ರಿಲ್ ನಿಂದ ಈವರೆಗೆ ಬಳ್ಳಾರಿಯಲ್ಲಿ 23 ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಿಕಾರಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. ಹೆರಿಗೆ ವೇಳೆ ಅಪೌಷ್ಟಿಕತೆ, ಅನಿಮಿಯಾ ಸೇರಿದಂತೆ ಇತರೆ ಕಾಯಿಲೆಯಿಂದಾಗಿ ಬಾಣಂತಿಯರ ಸಾವು ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read