HomeKarnatakaಬಳ್ಳಾರಿ : 'ಯುವನಿಧಿ' ಯೋಜನೆಯಡಿ ನೋಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ : ‘ಯುವನಿಧಿ’ ಯೋಜನೆಯಡಿ ನೋಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ ಪಾಸಾದವರಿಗೆ ರೂ.1500ಗಳನ್ನು ನೀಡಲಾಗುತ್ತದೆ.

ಅರ್ಹರು ಸೇವಾ ಸಿಂಧು ಪೋರ್ಟಲ್, ಅಟಲ್ ಜೀ ಕೇಂದ್ರ, ಕರ್ನಾಟಕ-1, ಬಳ್ಳಾರಿ-1 ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಹರು

2023ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರಾಗಿರಬೇಕು. ಸ್ವಯಂ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು.

ದಾಖಲೆಗಳು

ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅಥವಾ ದೂ.08392-294230 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular