BREAKING: ಬಾಣಂತಿಯರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಜಮೀರ್ ಅಹ್ಮದ್

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ ಸಚಿವ ಜಮೀರ್ ಅಹ್ಮದ್ ಘೋಷಿಸಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿತರು ಸಾವನ್ನಪ್ಪಿದ್ದರು. ಘಟನೆ ಬೆನ್ನಲ್ಲೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿತ್ತು. ಇದೀಗ ಈ ಪರಿಹಾರ ಮೊತ್ತವನ್ನು ಸಚಿವ ಜಮೀರ್ ಅಹ್ಮದ್ ಹೆಚ್ಚಿಸಿದ್ದಾರೆ.

ಸಂಡೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಚಿವ ಜಮಿರ್ ಅಹ್ಮದ್, ಬಾಣಂತಿಯರ ಸರಣಿ ಸಾವು ದು:ಖಕರ. ಮೃತರ ಕುಟುಂಬಕ್ಕೆ ಈಗಾಗಲೇ ಸರ್ಕಾರದ ವತಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಇದರ ಜೊತೆ ತಲಾ 3 ಲಕ್ಷ ರೂಪಾಯಿ ಹೆಚ್ಚಿಸಿ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read