ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ: ಓರ್ವನ ಬಂಧನ

ಬಳ್ಳಾರಿ: ಮಂತ್ರಾಲಯದ ರಾಯರ ಮಠಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತರನ್ನು ಮತಾಂತರಕ್ಕೆ ಯತ್ನಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ನಡೆದಿದೆ.

ಇಲ್ಲಿನ ತೆಕ್ಕಲಕೋಟೆ ಎಂಬಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರನ್ನು ಇಬ್ಬರು ಇಸ್ಲಾಂ ಧರ್ಮಕ್ಕೆ ಮತಾಂತರಿಸಲು ಯತ್ನಿಸಿದ್ದರು.

ಸಿರಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತರಿಗೆ ಜುಲೈ 18ರಂದು ಇಬ್ಬರು, ಇಸ್ಲಾಂ ಧರ್ಮದ ಬಗ್ಗೆ ಬೋಧನೆ ಮಾಡಲು ಶುರು ಮಾಡಿದ್ದಾರೆ. ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷಾ(44) ಹಾಗೂ ಸಾಯಿ ಬಾಬಾ (24) ಇಸ್ಲಾಂ ಮತಾಂತರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಗಾದಿಲಿಂಗಪ್ಪ ಎಂಬುವವರು ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೇ ಅನ್ಯ ಧರ್ಮದವರು ಮಾತನಾಡಿದ್ದನ್ನು ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಬಳಿಕ ಅವರಿಗೆ ಬುದ್ಧಿವಾದವನ್ನೂ ಹೇಳಿದ್ದಾರೆ. ಈ ಬಗ್ಗೆ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಸದ್ಯ ಪೊಲೀಸರು ಹುಸೇನ್ ಭಾಷಾ ಎಂಬಾತನನು ಬಂಧಿಸಿದ್ದಾರೆ. ಮತ್ತೋರ್ವ ಆರೊಪಿ ನಾಪತ್ತೆಯಾಗಿದ್ದಾನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read