HomeKarnatakaBIG NEWS: ಬಿಸಿಯೂಟ ತಯಾರಿಸುತ್ತಿದ್ದಾಗ ಕುಕ್ಕರ್ ಸ್ಫೋಟ; ಓರ್ವ ಮಹಿಳೆಗೆ ಗಂಭೀರ ಗಾಯ

BIG NEWS: ಬಿಸಿಯೂಟ ತಯಾರಿಸುತ್ತಿದ್ದಾಗ ಕುಕ್ಕರ್ ಸ್ಫೋಟ; ಓರ್ವ ಮಹಿಳೆಗೆ ಗಂಭೀರ ಗಾಯ

ಬಳ್ಳಾರಿ: ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅನಾಹುತವೊಂದು ಸಂಭವಿಸಿದೆ. ಬೇಳೆ ಬೇಯಿಸಲೆಂದು ಇಟ್ಟಿದ್ದ ಕುಕ್ಕರ್ ಸ್ಫೋಟಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಶಾಲೆಯ ಬಿಸಿಯೂಟ ತಯಾರಿಸುವ ಕೊಠಡಿಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸುತ್ತಿದ್ದಾಗ ಸಾಂಬಾರ್ ಗೆಂದು ಕುಕ್ಕರ್ ನಲ್ಲಿ ಬೇಳೆ ಬೇಯಿಸಲು ಇಡಲಾಗಿತ್ತು. ಈ ವೇಳೆ ಏಕಾಏಕಿ ಕುಕ್ಕರ್ ಬ್ಲಾಸ್ಟ್ ಆಗಿದೆ. ಈ ವೇಳೆ ಬಿಸಿಯೂಟ ತಯಾರಿಸುತ್ತಿದ್ದ ಲೋಕಮ್ಮ ಎಂಬ ಮಹಿಳೆ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ಕೊಠಡಿಯಲ್ಲಿದ್ದ ಮೂವರು ಮಹಿಳೆಯರು ಪಾರಾಗಿದ್ದಾರೆ. ಗಾಯಾಳು ಮಹಿಳೆಯನ್ನು ಕಂಪ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಕ್ಕರ್ ಸ್ಫೋಟಗೊಂಡಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular