HomeLatest NewsBREAKING: ಬೇಲೂರು ಬಸ್ ನಿಲ್ದಾಣದ ಬಳಿ ಯುವಕನನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ

BREAKING: ಬೇಲೂರು ಬಸ್ ನಿಲ್ದಾಣದ ಬಳಿ ಯುವಕನನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ

ಹಾಸನ: ಯುವಕನೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ.

ಪಟ್ಟಣದ ಹಳೆಬೀದಿಯ ಗಿರೀಶ್ (22) ಕೊಲೆಯಾದ ಯುವಕ. ಬಸ್ ನಿಲ್ದಾಣದ ಬಳಿ ನಿಂತಿದ್ದ ಗಿರೀಶ್ ನನ್ನು ಅಜ್ಜೇನಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬಾತ ಏಕಾಏಕಿ ದಾಳಿ ನಡೆಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ. ಯಾವ ಕಾರಣಕ್ಕಾಗಿ ಯುವಕನ ಹತ್ಯೆಯಾಗಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular