HomeKarnatakaBREAKING NEWS: ಬೆಮೆಲ್ ಕಂಪನಿಯಲ್ಲಿ ತೀವ್ರಗೊಂಡ ಪ್ರತಿಭಟನೆ; ಇಬ್ಬರು ಅಸ್ವಸ್ಥ

BREAKING NEWS: ಬೆಮೆಲ್ ಕಂಪನಿಯಲ್ಲಿ ತೀವ್ರಗೊಂಡ ಪ್ರತಿಭಟನೆ; ಇಬ್ಬರು ಅಸ್ವಸ್ಥ

ಕೋಲಾರ: ಬೆಮೆಲ್ ನೇಮಕಾತಿಯಲ್ಲಿ ಸ್ಥಳೀಯರಿಗೆ ಅವಕಾಶ ನೀಡುವಂತೆ ಒತ್ತಾಯಿಸಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಪ್ರತಿಭಟನಾ ನಿರತ ಕಾರ್ಮಿಕರು ನಿನ್ನೆ ಮಧ್ಯಾಹ್ನದಿಂದ ಅನ್ನಾಹಾರ ತ್ಯಜಿಸಿ ಪ್ರತಿಭಟನೆ ನಡೆಸುತ್ತಿದ್ದು, ಹಲವರು ಅಸ್ವಸ್ಥಗೊಂಡಿದ್ದಾರೆ. ಪ್ರತಿಭಟನಾ ನಿರತ ಇಬ್ಬರು ಕಾರ್ಮಿಕರು ತೀವ್ರ ಅಸ್ವಸ್ಥಗೊಂಡಿದ್ದು, ಕೋಲಾರ ಜಿಲ್ಲೆಯ ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಮೆಲ್ ನಲ್ಲಿ ಉತರ ಭಾರತ ಮೂಲದ ಕಾರ್ಮಿಕರ ನೇಮಕ ಖಂಡಿಸಿ ಸ್ಥಳೀಯರಿಗೆ ಅವಕಾಶ ನೀಡುವಂತೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular