ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಆಯ್ಕೆಯಾಗಿದ್ದಾರೆ.
ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ಇಂದು ಬೆಳಿಗ್ಗೆ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ಬೆಮೂಲ್ ಸದಸ್ಯರು, ಪದಾಧಿಕಾರಿಗಳು ಒಮ್ಮತದಿಂದ ಡಿ.ಕೆ.ಸುರೇಶ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಮೂಲಕ ಬೆಮೂಲ್ ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ ಆಯ್ಕೆಯಾಗಿದ್ದಾರೆ.

